
ಪ್ರಗತಿವಾಹಿನಿ ಸುದ್ದಿ: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೌಲ್ವಿಯನ್ನು ಬಂಧಿಸಲಾಗಿದೆ.
ಕಲ್ಲು ತೂರಾಟ ಪ್ರಕರಣ ಸಂಬಂಧ ಗಲಾಟೆಗೆ ಪ್ರಚೋದನೆ ನೀಡಿದ್ದ ಆರೋಪದಲ್ಲಿ ಮೌಲ್ವಿ ಮುಫ್ತಿ ಮುಸ್ತಾಕ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಚೋದನಕಾರಿ ಭಾಷಣ ಮಾಡಿದ್ದ ಮೌಲ್ವಿ ಮುಸ್ತಾಕ್ ನನ್ನು ಬಂಧಿಸುವಂತೆ ಬಿಜೆಪಿ ನಾಯಕರು ಹಾಗೂ ಸಾರ್ವಜನಿಕರು ಒತ್ತಾಯಿಸಿದ್ದರು. ಇದೀಗ ಮೌಲ್ವಿ ಬಂಧಿಸುವಲ್ಲಿ ಮೈಸೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.