ಪ್ರಗತಿವಾಹಿನಿ ಸುದ್ದಿ; ಮುಂಬೈ: ಗಡಿ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೆ ಕ್ಯಾತೆ ತೆಗೆದಿರುವ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಮಹಾರಾಷ್ಟ್ರ ಕರ್ನಾಟಕ ಸೀಮಾ ವಿವಾದ ಸಂಘರ್ಷ ಅನಿ ಸಂಕಲ್ಪ ಎಂಬ ಹೆಸರಿನ ಪುಸ್ತಕ ಬಿಡುಗಡೆ ಮಾಡಿದ್ದಾರೆ.
ಡಾ.ದೀಪಕ್ ಪವಾರ್ ಸಂಪಾದಕತ್ವದಲ್ಲಿ ರಚಿಸಲಾಗಿರುವ ಈ ಪುಸ್ತಕವನ್ನು ಮುಂಬೈನ ಮಲಬಾರ್ ಹಿಲ್ ನಲ್ಲಿರುವ ಸಹ್ಯಾದ್ರಿ ರಾಜ್ಯ ಅತಿಥಿ ಗೃಹದಲ್ಲಿ ಬಿಡುಗಡೆ ಮಾಡಲಾಯಿತು. ಈ ವೇಳೆ ಬೆಳಗಾವಿ, ಕಾರವಾರ, ನಿಪ್ಪಾಣಿ ಸಂಯುಕ್ತ ಮಹಾರಾಷ್ಟ್ರ ಎಂದು ಎಂಇಎಸ್ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ.
ಪುಸ್ತಕದಲ್ಲಿ ಏನಿದೆ?
ಪುಸ್ತಕದಲ್ಲಿ ಗಡಿವಿವಾದ ಬಗ್ಗೆ ಮಹಾರಾಷ್ಟ್ರದ ನಿಲುವು, 1956-2021ವರೆಗೆ ನಡೆದ ಘಟನಾವಳಿ, ಕರ್ನಾಟಕ ಮಹಾರಾಷ್ಟ್ರ ಗಡಿ ಸಂಘರ್ಷ, ಬೆಳಗಾವಿಯಲ್ಲಿ ಹುತಾತ್ಮ ದಿನ, ಕರಾಳ ದಿನಾಚರಣೆ, ಕರ್ನಾಟಕ ಸರ್ಕಾರದಿಂದ ಮರಾಠಿಗರ ಮೇಲೆ ನಿರಂತರ ದೌರ್ಜನ್ಯ, ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಬೆಳಗಾವಿ ಭೇಟಿ ವೇಳೆ ನಡೆದ ಘಟನೆ, ಶಿವಸೇನೆ ಸಂಸ್ಥಾಪಕ ಬಾಳಾ ಠಾಕ್ರೆ ರಚಿಸಿರುವ ವಿವಾದಿತ ವ್ಯಂಗ್ಯಚಿತ್ರ ಸೇರಿದಂತೆ ಹಲವಾರು ಅಂಶಗಳನ್ನು ಉಲ್ಲೇಖಿಸಲಾಗಿದೆ.
ಗಡಿ ವಿಚಾರ ಕುರಿತು ಮತ್ತೆ ಕ್ಯಾತೆಗೆ ಮುಂದಾದ ‘ಮಹಾ’ ಸಿಎಂ; ಪುಸ್ತಕ ಬಿಡುಗಡೆಗೆ ಸಿದ್ಧತೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ