Kannada NewsLatest

ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸದೇ ಸುಮ್ಮನೇ ಕೂರಲ್ಲ ಎಂದ ಮಹಾ ಸಿಎಂ ಉದ್ಧವ್ ಠಾಕ್ರೆ

ಪ್ರಗತಿವಾಹಿನಿ ಸುದ್ದಿ; ಮುಂಬೈ: ಮರಾಠಿಗರು ತಮ್ಮ ತಾಕತ್ತು ತೋರಿಸುವ ಕಾಲ ಬಂದಿದೆ. ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸುತ್ತೇವೆ. ಅಲ್ಲಿಯವರೆಗೂ ಸುಮ್ಮನೆ ಕೂರುವ ಪ್ರಶ್ನೆಯೇ ಇಲ್ಲ ಎಂದು ಹೇಳುವ ಮೂಲಕ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಗಡಿ ವಿಚಾರ ಕುರಿತ ಮಹಾರಾಷ್ಟ್ರ ಕರ್ನಾಟಕ ಸೀಮಾ ವಿವಾದ ಸಂಗರ್ಷ ಅನಿ ಸಂಕಲ್ಪ ಎಂಬ ಪುಸ್ತಕ ಬಿಡುಗಡೆ ಮಾಡಿ ಪ್ರಚೋದನಕಾರಿ ಭಾಷಣ ಮಾಡಿರುವ ಉದ್ಧವ್ ಠಾಕ್ರೆ, ಭಾಷಾವಾರು ಪ್ರಾಂತ್ಯದ ರಚನೆ ವೇಳೆ ನಮಗೆ ಅನ್ಯಾಯವಾಗಿದೆ. ಮರಾಠಿ ಅಸ್ಮಿತೆ, ಮರಾಠಿ ತಾಕತ್ತು ತೋರಿಸುವ ಕಾಲ ಬಂದಿದೆ. ಮರಾಠಿ ಭಾಷಿಕರ ಪ್ರದೇಶವನ್ನು ಮಹಾರಾಷ್ಟ್ರಕ್ಕೆ ಸೇರಿಸುತ್ತೇವೆ ಎಂದಿದ್ದಾರೆ.

ಬೆಳಗಾಂವ್ ಅನ್ನು ಬೆಳಗಾವಿ ಎಂದು ನಾಮಕರಣ ಮಾಡಿದ್ದಾರೆ. ಬೆಳಗಾಂವ್ ನಲ್ಲಿ ಸುವರ್ಣ ಸೌಧ ಕಟ್ಟಿ ಅಧಿವೇಶನ ಮಾಡುತ್ತಾರೆ. 2ನೇ ರಾಜಧಾನಿ ಎಂದೂ ಘೋಷಿಸುತ್ತಾರೆ. ಮರಾಠಾ ಭಾಷಿಕರ ಪ್ರದೇಶವನ್ನು ಈ ರೀತಿ ಮಾಡುವುದು ನ್ಯಾಯಾಂಗ ನಿಂದನೆಯಲ್ಲವೇ? ಕರ್ನಾಟಕ ಸರ್ಕಾರ ಮರಾಠಿಗರ ಮೇಲೆ ನಿರಂತರ ದೌರ್ಜನ್ಯವೆಸಗುತ್ತಿದೆ. ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡಿದೆ ಎಂದು ಆರೋಪಿಸಿದ್ದಾರೆ.

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button