ರಾಮ ಮಂದಿರ ನಿರ್ಮಾಣಕ್ಕೆ 1 ಕೋಟಿ ಹಣ ನೀಡಿದ ಉದ್ಧವ್ ಠಾಕ್ರೆ

ಪ್ರಗತಿವಾಹಿನಿ ಸುದ್ದಿ; ಮುಂಬೈ: ನಾವು ಬಿಜೆಪಿಯೊಂದಿಗಿನ ಸ್ನೇಹ ಸಂಬಂಧ ತೊರೆದಿದ್ದೇವೆ ಹೊರತು ಹಿಂದುತ್ವವನ್ನು ಅಲ್ಲ ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿದ್ದಾರೆ.

ಅಯೋಧ್ಯೆಗೆ ಭೇಟಿ ನೀಡಿದ ಶಿವಸೇನೆ ಅಧ್ಯಕ್ಷ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ, ಶನಿವಾರ ರಾಮ ಮಂದಿರ ನಿರ್ಮಾಣಕ್ಕೆ ರೂ. 1 ಕೋಟಿ ಹಣವನ್ನು ನೀಡಿದರು.

ಈ ವೇಳೆ ಮಾತನಾಡಿದ ಅವರು,ಕೊರೋನಾ ವೈರಸ್ ಕಾರಣದಿಂದ ಸರಯೂ ನದಿಯ ಆರತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ಆದರೆ ನಾನು ಅಯೋಧ್ಯೆಗೆ ಬೇಟಿ ನೀಡುತ್ತಿರುತ್ತೇನೆ ಎಂದರು.

ಸದ್ಯ ಎನ್​ಸಿಪಿ ಮತ್ತು ಕಾಂಗ್ರೆಸ್​ ಜತೆಗೂಡಿ ಸರ್ಕಾರ ನಡೆಸುತ್ತಿರುವ ಶಿವಸೇನೆ ಪಕ್ಷದ ಸಿದ್ದಾಂತದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಶಿವಸೇನೆ ಈಗಲೂ ಹಿಂದುತ್ವವನ್ನೇ ಪ್ರತಿಪಾದಿಸುತ್ತದೆ. ಆದರೆ ಬಿಜೆಪಿಯಿಂದ ದೂರವಾಗಿದ್ದೇವೆ ಅಷ್ಟೇ ಎಂದು ತಿಳಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button