Cancer Hospital 2
Beereshwara 36
LaxmiTai 5

*ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ವಿರುದ್ಧ FIR ದಾಖಲು*

Anvekar 3

ಪ್ರಗತಿವಾಹಿನಿ ಸುದ್ದಿ; ಉಡುಪಿ: ಉಡುಪಿ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಉಡುಪಿ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ ಖಂಡಿಸಿ ಬಿಜೆಪಿ ಪ್ರತಿಭಟನೆ ತೀವ್ರಗೊಳಿಸಿದ್ದು, ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಶೆಟ್ಟಿ ವಿರುದ್ಧ ಎಪ್ ಐ ಆರ್ ದಾಖಲಾಗಿದೆ.

Emergency Service

ಅಲ್ಲದೇ ಜುಲೈ 28ರಂದು ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ಸಭೆಯಲ್ಲಿ ಮುಸ್ಲಿಂ ಹುಡುಗಿಯರನ್ನು ಶಾಲೆಗೆ ಸೇರಿಸಬೇಡಿ. ಮದರಸಗಳಿಗೆ ಸೇರಿಸಿ ಎನ್ನುವ ಮೂಲಕ ವೀಣಾ ಶೆಟ್ಟಿ ಪ್ರಚೋದನಾಕಾರಿ ಭಾಷಣ ಮಾಡಿದ್ದರು ಎನ್ನಲಾಗಿದೆ. ಪ್ರಚೋದನಕಾರಿ ಭಾಷಣ ಹಿನ್ನೆಲೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಜೊತೆಗೆ ವೀಣಾ ಶೆಟ್ಟಿ ಅವರ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಹಿನ್ನೆಲೆಯಲ್ಲಿ ಸುಮೋಟೋ ಕೇಸ್ ಕೂಡ ದಾಖಲಾಗಿದೆ.


Bottom Add3
Bottom Ad 2