VTU Add
Beereshwara 36
LaxmiTai 5

*ಉಡುಪಿ ಖಾಸಗಿ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ; ಮೂವರ ವಿರುದ್ಧ FIR ದಾಖಲು; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್*

Anvekar 3

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಉಡುಪಿಯ ಖಾಸಗಿ ಕಾಲೇಜೊಂದರ ಶೌಚಾಲಯದಲ್ಲಿ ಮೊಬೈಲ್‌ ಇಟ್ಟು ವಿಡಿಯೋ ಚಿತ್ರೀಕರಣ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳ ವಿರುದ್ಧ ಕಾನೂನಿನಡಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

Emergency Service

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಪ್ರಕರಣ ಕುರಿತು ಮೂವರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಕಾನೂನಿನಡಿ ಕ್ರಮಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.

Cancer Hospital 2

ಕಾನೂನಿಗಿಂತ ಯಾರೂ ದೊಡ್ಡವರಲ್ಲ, ನನಗೆ ಮಾಹಿತಿ ಬಂದ ಮಾಹಿತಿ ಪ್ರಕಾರ ಘಟನೆಗೆ ಸಂಬಂಧಪಟ್ಟಂತೆ ಯಾವುದೇ ವಿಡಿಯೋ ಕೂಡ ವೈರಲ್ ಆಗಿಲ್ಲ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.

Bottom Add3
Bottom Ad 2