*ಕಾಲೇಜು ಮಹಿಳಾ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ಚಿತ್ರೀಕರಣ; ಮೂವರು ಮುಸ್ಲಿಂ ವಿದ್ಯಾರ್ಥಿನಿಯರು ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ; ಉಡುಪಿ: ಕಾಲೇಜಿನ ಶೌಚಾಲಯದಲ್ಲಿ ಮೊಬೈಲ್ ಇಟ್ಟು ಅನ್ಯಕೋಮಿನ ವಿದ್ಯಾರ್ಥಿಯಿಯರ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಮೂವರು ವಿದ್ಯಾರ್ಥಿನಿಯರನ್ನು ಅಮಾನತು ಮಾಡಲಾಗಿದೆ.
ಉಡುಪಿ ಜಿಲ್ಲೆಯ ಅಂಬಲಪಾಡಿ ಬೈಪಾಸ್ ಬಳಿಯ ನೇತ್ರಜ್ಯೋತಿ ಕಾಲೇಜಿನ ಮಹಿಳಾ ಶೌಚಾಲಯದಲ್ಲಿ ಮೂವರು ಅನ್ಯಕೋಮಿನ ವಿದ್ಯಾರ್ಥಿನಿಯರು ಮೊಬೈಲ್ ಇಟ್ಟು ವಿಡಿಯೋ ಚಿತ್ತೀಕರಿಸುತ್ತಿದ್ದರು. ಹೀಗೆ ಚಿತ್ರಿಸಿಕೊಂಡ ಖಾಸಗಿ ವಿಡಿಯೋಗಳನ್ನು ತಮ್ಮ ಕೋಮಿನ ವಿದ್ಯಾರ್ಥಿಗಳಿಗೆ ಕಳುಹಿಸುತ್ತಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ.
ಘಟನೆ ಬೆಳಕಿಗೆ ಬಂದ ಬೆನ್ನಲ್ಲೇ ಕಾಲೇಜಿನಲ್ಲಿ ಗಲಾಟೆ ನಡೆದಿದೆ. ವಿದ್ಯಾರ್ಥಿನಿಯರು ಮೂವರು ವಿದ್ಯಾರ್ಥಿನಿಯರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕಾಲೇಜು ಆಡಳಿತ ಮಂಡಳಿಗೆ ದೂರು ನೀಡಿದ್ದಾರೆ. ಇದೀಗ ಕಾಲೇಜು ಆಡಳಿತ ಮಂಡಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಮುಸ್ಲೀಂ ವಿದ್ಯಾರ್ಥಿನಿಯರನ್ನು ಸಸ್ಪೆಂಡ್ ಮಾಡಿದೆ. ಆದರೆ ಈವರೆಗೂ ಕಾಲೇಜು ಆಡಳಿತ ಮಂಡಳಿ ಪೊಲೀಸ್ ಠಾಣೆಗೆ ದೂರು ನೀಡಿಲ್ಲ.
ಕಾಲೇಜಿಗೆ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಧಾವಿಸಿ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ