Kannada NewsKarnataka NewsLatestPolitics
*ಇಂದು ಕ್ಯಾಮರಾ ಇಟ್ಟ ವಿದ್ಯಾರ್ಥಿಗಳು ನಾಳೆ ಬಾಂಬ್ ಕೊಟ್ಟರೂ ಇಡುತ್ತಾರೆ; ಬಿಜೆಪಿ ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ; ಉಡುಪಿ: ಉಡಿಪಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಆರೋಪ ಪ್ರಕರಣ ರಾಜಕೀಯ ತಿರುವು ಪಡೆದಿದ್ದು, ಪ್ರಕರಣ ಖಂಡಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ.
ಉಡುಪಿಯ ಕಡಿಯಾಳಿ ಬಿಜೆಪಿ ಕಚೇರಿಯಿಂದ ಎಸ್ ಪಿ ಕಚೇರಿವರೆಗೆ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿದ್ದು, ಈ ವೇಳೆ ಮಾತನಾಡಿರುವ ಶಾಸಕ ಯಶ್ ಪಾಲ್ ಸುವರ್ಣ್ ಸರ್ಕಾರ ಹಾಗೂ ಗೃಹ ಸಚಿವರ ವಿರುದ್ಧ ಕಿಡಿ ಕಾರಿದ್ದಾರೆ.
ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣವನ್ನು ಗೃಹ ಸಚಿವ ಪರಮೇಶ್ವರ್ ಮಕ್ಕಳ ಆಟ ಎಂದಿದ್ದಾರೆ. ಅವರ ಮಗ ಲಿಂಗ ಬದಲಿಸಿದ್ದೇ ಮಕ್ಕಳಾಟ. ಇಂದು ಕ್ಯಾಮರಾ ಇಟ್ಟ ವಿದ್ಯಾರ್ಥಿಗಳು ನಾಳೆ ಬಾಂಬ್ ಕೊಟ್ಟರೂ ಇಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಕರಣದ ಬಗ್ಗೆ ಸೂಕ್ತ ತನಿಖೆಯಾಗಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದ್ದಾರೆ.