Kannada NewsKarnataka NewsLatest

*ಶೌಚಾಲಯದಲ್ಲಿ ವಿಡಿಯೋ ಕೇಸ್; ಕಾಲೇಜಿಗೆ ಭೇಟಿ ನೀಡಿದ ನಟಿ ಖುಷ್ಬು ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ; ಉಡುಪಿ: ಉಡುಪಿ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಆರೋಪಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ, ನಟಿ ಖುಷ್ಬು ಪ್ರತಿಕ್ರಿಯೆ ನೀಡಿದ್ದು, ಆ ಶೌಚಾಲಯದಲ್ಲಿ ಯಾವುದೇ ಹಿಡನ್ ಕ್ಯಾಮರಾ ಇರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಉಡುಪಿಯ ನೇತ್ರಜ್ಯೋತಿ ಕಾಲೇಜಿಗೆ ಭೇಟಿ ನೀಡಿ, ಅಲ್ಲಿನ ಶೌಚಾಲಯವನ್ನು ಪರಿಶೀಲನೆ ನಡೆಸಿದ ಖುಷ್ಬು, ಕಾಲೇಜಿನ ಲೇಡಿಸ್ ಟಾಯ್ಲೆಟ್ ನಲ್ಲಿ ಯಾವುದೇ ಹಿಡನ್ ಕ್ಯಾಮರಾ ಅಳವಡಿಸಿರಲಿಲ್ಲ. ಯಾರೂ ಕೂಡ ಅಂತಹ ವದಂತಿಗಳನ್ನು ಹಬ್ಬಿಸಬಾರದು. ವಿದ್ಯಾರ್ಥಿನಿಯರ ಮೊಬೈಲ್ ನಲ್ಲಿಯೂ ಯಾವುದೇ ಫೋಟೋ, ವಿಡಿಯೋಗಳು ಸಿಕ್ಕಿಲ್ಲ ಎಂದು ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಫೇಕ್ ವಿಡಿಯೋಗಳನ್ನು ಹರಿಬಿಡಲಾಗುತ್ತಿದೆ. ಈ ರೀತಿ ವದಂತಿಗಳನ್ನು ಯಾರೂ ಹಬ್ಬಿಸಬಾರದು. ತನಿಖೆ ಮುಗಿಯುವವರೆಗೂ ಯಾವುದೇ ವಿಚಾರ ಬಹಿರಂಗ ಪಡಿಸಲ್ಲ. ಕಾಲೇಜು ಆಡಳಿತ ಮಡಳಿಯಿಂದ ಮಾಹಿತಿ ಪಡೆದಿದ್ದೇನೆ. ಆ ಶೌಚಾಲಯದಲ್ಲಿ ಹಿಡನ್ ಕ್ಯಾಮರಾ ಇರಲಿಲ್ಲ. ಅಂತಹ ಯಾವುದೇ ಘಟನೆ ಕೂಡ ನಡೆದಿಲ್ಲ. ಈಗಲೇ ಯಾವುದೇ ನಿರ್ಧಾರಕ್ಕೆ ಬರಲು ಸಾಧ್ಯವಿಲ್ಲ. ಪೊಲೀಸರು ಸೂಕ್ತ ರೀತಿಯಲ್ಲಿ ತನಿಖೆ ನಡೆಸಿದ್ದಾರೆ. ಎಲ್ಲಾ ಮಾಹಿತಿಯನ್ನು ಸಂಗ್ರಹಿಸಿ ನಂತರ ಮಾತನಾಡುತ್ತೇನೆ. ಈ ಘಟನೆ ಬಗ್ಗೆ ಯಾವುದೇ ರಾಜಕೀಯ ಬಣ್ಣಬಳಿಯುವುದು ಬೇಡ. ಇದರಿಂದ ವಿದ್ಯಾರ್ಥಿನಿಯರ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ತಿಳಿಸಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button