ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಉಡುಪಿ ಕಾಲೇಜಿನಲ್ಲಿ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣದ ಬಗ್ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ನೀಡಿರುವ ಹೇಳಿಕೆ ತೀವ್ರ ಆಕ್ಷೇಪಕ್ಕೆ ಕಾರಣವಾಗಿದ್ದು, ಇದರ ಬೆನ್ನಲೇ ಗೃಹ ಸಚಿವರು ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ನಾನು ಈ ಪ್ರಕರಣವನ್ನು ಮಕ್ಕಳ ಆಟವೆಂದು ಹೇಳಿಲ್ಲ. ಸ್ನೇಹಿತರಲ್ಲಿ ಇಂತಹ ಗಹ್ಟನೆಗಳು ನಡೆಯುತ್ತವೆ, ಅದೆಲ್ಲ ಅಲ್ಲಿಗೆ ಬಿಟ್ಟು ಹೋಗುತ್ತಿತ್ತು ಎಂತ ಹೇಳಿದ್ದು. ಅಂತಹ ಘಟನೆಗಳ ಬಗ್ಗೆ ಕ್ರಮಕ್ಕೆ ಪ್ರಿನ್ಸಿಪಾಲ್ ಗೆ ಬಿಡಬೇಕು. ಅದಕ್ಕೆ ಅವರನ್ನು ಸಸ್ಪೆಂಡ್ ಮಾಡುವುದೋ ಅಥವಾ ಇನ್ನೂ ಹೆಚ್ಚಿನ ಕ್ರಮ ಕೈಗೊಳ್ಳುವುದೋ ಎಂಬುದನ್ನು ಅವರು ತೆಗೆದುಕೊಳ್ತಾರೆ. ನಾವು ಇದಕ್ಕೆ ಮಧ್ಯಪ್ರವೇಶ ಮಾಡಬಾರದು ಎಂದರು.
ಇನ್ನು ಉಡುಪಿ ಕಾಲೇಜಿನಲ್ಲಾದ ಪ್ರಕರಣದ ಬಗ್ಗೆ ಈಗಾಗಲೇ ಪೊಲೀಸರು ತನಿಖೆ ನಡೆಸಿದ್ದಾರೆ. ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ. ಸತ್ಯಾಸತ್ಯತೆ ಹೊರ ಬರಲಿದೆ ಎಂದು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ