
ಪ್ರಗತಿವಾಹಿನಿ ಸುದ್ದಿ; ಉಡುಪಿ: ಉಡುಪಿ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ಖಂಡಿಸಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ.
ಉಡುಪಿಯ ಹುತಾತ್ಮರ ಸ್ಮಾರಕ ಬಳಿ ಎಬಿವಿಪಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು, ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಉಡುಪಿ ಎಸ್ ಪಿ ಅಕ್ಷಯ್ ಮಚ್ಚೀಂದ್ರ ಭೇಟಿ ನೀಡಿದ್ದಾರೆ.
ಉಡುಪಿ ನೇತ್ರಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಶೌಚಾಲಯದಲ್ಲಿ ಅನ್ಯಕೋಮಿನ ವಿದ್ಯಾರ್ಥಿನಿಯರು ಮೊಬೈಲ್ ಇಟ್ಟು, ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಈ ಘಟನೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ, ನಟಿ ಖುಷ್ಬು ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
 
					 
				 
					 
					 
					 
					
 
					 
					 
					


