
ಪ್ರಗತಿವಾಹಿನಿ ಸುದ್ದಿ: ವಿವಿಧ ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ನೇಮಕಾತಿ ಮುಂದುವರೆದ ಭಾಗವಾಗಿ ರಾಜ್ಯ ಸರ್ಕಾರ ಕೆಲ ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.
ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿ ಐಎ ಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ನೇಮಕ ಮಾಡಲಾಗಿದೆ. ಚಾಮರಾಜನಗರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಗಿ ಎಂ.ವಿ.ವೆಂಕಟೇಶ್, ಹಾಸನ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿ ನವೀನ್ ರಾಜ್ ಸಿಂಗ್, ವಿಜಯನಗರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿ ಸಮೀರ್ ಸುಕ್ಲಾ ಅವರನ್ನು ನೇಮಕ ಮಾಡಲಾಗಿದೆ. ಬೆಳಗಾವಿಗೆ ವಿಫುಲ್ ಬನ್ಸಾಲ್ ಉಸ್ತುವಾರಿ ಕಾರ್ಯದರ್ಶಿಯಾಗಿದ್ದಾರೆ.


