Kannada NewsKarnataka NewsLatest
		
	
	
ಉಡುಪಿ ಸಮಸ್ಯೆ: ಸಿಎಂ ಉಪಸ್ಥಿತಿಯಲ್ಲಿ ಗುರುವಾರ ವಿಶೇಷ ಸಭೆ ಆಯೋಜನೆ – ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾಹಿತಿ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಉಡುಪಿ ಜಿಲ್ಲೆಯಲ್ಲಿ ಉಂಟಾಗಿರುವ ಮರಳು, ಕೆಂಪು ಕಲ್ಲು ಹಾಗೂ ಇನ್ನಿತರೇ ಸಮಸ್ಯೆಗಳ ಬಗ್ಗೆ ಚರ್ಚಿಸಲು ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಸ್ಥಿತಿಯಲ್ಲಿ ವಿಶೇಷ ಸಭೆ ಆಯೋಜಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳಕರ್ ತಿಳಿಸಿದ್ದಾರೆ.
ಗುರುವಾರ ಸಂಜೆ.5 ಗಂಟೆಗೆ ಬೆಂಗಳೂರಿನ ವಿಧಾನಸೌಧದ 3ನೇ ಮಹಡಿ ಕೊಠಡಿ ಸಂಖ್ಯೆ-313ರಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ, ಗಣಿ ಮತ್ತು ಭೂ ವಿಜ್ಞಾನ ಸಚಿವರು ಎಸ್.ಎಸ್.ಮಲ್ಲಿಕಾರ್ಜುನ್, ಉಡುಪಿ ಜಿಲ್ಲೆಯ ಹಿರಿಯ ಅಧಿಕಾರಿಗಳು ಸಹ ಭಾಗವಹಿಸುವರು.
 
					 
				 
					 
					 
					 
					
 
					 
					 
					


