Latest

*BREAKING: ಭಾರಿ ಮಳೆ: ಈ ಜಿಲ್ಲೆಯಲ್ಲಿ ಶಾಲಾ-ಕಾಲೇಜಿಗೆ ರಜೆ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಕರಾವಳಿ ಜಿಲ್ಲೆಗಳಲ್ಲಿ ವರುಣಾರ್ಭಟ ಮುಂದುವರೆದಿದೆ. ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಮುಂದುವರೆದಿದ್ದು, ಸಾಲು ಸಾಲು ಅವಾಂತರಗಳು ಸೃಷ್ಟಿಯಾಗಿವೆ. ನಾಳೆಯೂ ಮಳೆಯ ಅಬ್ಬರ ಜೋರಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮುನೆಚ್ಚರಿಕಾ ಕ್ರಮವಾಗಿ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಐಟಿಐ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆದೇಶ ಹೊರಡಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button