3 ವಿದ್ಯಾರ್ಥಿಗಳಿಗೆ ಕೊರೋನಾ ವೈರಸ್ ಶಂಕೆ

ಪ್ರಗತಿವಾಹಿನಿ ಸುದ್ದಿ; ಉಡುಪಿ: ವಿದೇಶದಿಂದ ಆಗಮಿಸಿದ್ದ ಮಣಿಪಾಲ ಮೂಲದ ಮೂವರು ವಿದ್ಯಾರ್ಥಿಗಳಲ್ಲಿ ಕೆಮ್ಮು, ಜ್ವರದ ಲಕ್ಷಣಗಳು ಕಂಡು ಬಂದಿದ್ದು, ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ಶಂಕೆ ವ್ಯಕ್ತವಾಗಿದೆ. ಈ ಹಿನ್ನಲೆಯಲ್ಲಿ ಆವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಮೆರಿಕಾ, ಕುವೈಟ್ ಹಾಗೂ ಮಲೇಷ್ಯಾದಿಂದ ಬಂದಿರುವ ಈ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೂವರಿಗೂ ಪ್ರತ್ಯೇಕ ವಾರ್ಡ್ ನಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ.

ವಿದ್ಯಾರ್ಥಿಗಳ ಗಂಟಲ ದ್ರವದ ಮಾದರಿಯನ್ನು ಬೆಂಗಳೂರಿಗೆ ರವಾನೆ ಮಾಡಲಾಗಿದೆ, ಒಂದೆರಡು ದಿನದಲ್ಲಿ ವೈದ್ಯಕೀಯ ವರದಿ ಬರಲಿದೆ ಎಂದು ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button