Wanted Tailor2
Cancer Hospital 2
Bottom Add. 3

*ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಕೇಸ್; ಬಗೆದಷ್ಟು ಹೊರಬರುತ್ತಿದೆ ಹಂತಕನ ಇತಿಹಾಸ*

ಪ್ರಗತಿವಾಹಿನಿ ಸುದ್ದಿ; ಉಡುಪಿ: ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬೆಳಗಾವಿ ಜಿಲ್ಲೆಯ ಕುಡುಚಿಯಲ್ಲಿ ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಪ್ರವೀಣ್ ಚೌಗಲೆ ಕೊಲೆ ಮಾಡಿದ್ದು ತಾನೆ ಎಂದು ತಪ್ಪೊಪ್ಪಿಕೊಂಡಿದ್ದಾನೆ.

ಉಡುಪಿಯಲ್ಲಿ ಸುದ್ದಿಗರರೊಂದಿಗೆ ಮಾತನಾಡಿದ ಪೊಲೀಸ್ ವರಿಷ್ಥಾಧಿಕಾರಿ ಡಾ.ಅರುಣ್, ಚಾಕುವಿನಿಂದ ಇರಿದು ಒಂದೇ ಕುಟುಂಬದ ನಾಲ್ವರನ್ನು ಕೊಲೆಗೈದ ಆರೋಪಿ ಪ್ರವೀಣ್ ಚೌಗಲೆ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ. ಅಯ್ನಾಝ್ ಕೊಲೆ ಮಾಡುವುದೇ ಆತನ ಉದ್ದೇಶವಾಗಿತ್ತು. ತಪ್ಪಿಸಿಕೊಳ್ಳಲು, ಸಾಕ್ಷ್ಯನಾಶಕ್ಕಾಗಿ ಉಳಿದವರ ಕೊಲೆ ಮಾಡಿದ್ದಾಗಿ ಆರೋಪಿ ಹೇಳಿದ್ದಾನೆ ಎಂದು ತಿಳಿಸಿದ್ದಾರೆ.

ಕೊಲೆಗೆ 3-4 ಕಾರಣಗಳಿರುವ ಸಾಧ್ಯತೆ ಇದೆ. ಪ್ರಕರಣದ ಬಗ್ಗೆ ಸಂಪೂರ್ಣ ತನಿಖೆ ಮಾಡದೇ ಹತ್ಯೆಗೆ ಕಾರಣ ಹೇಳಲು ಸಾಧ್ಯವಿಲ್ಲ ಎಂದರು.

ಇನ್ನು ಆರೋಪಿ ಪ್ರವೀಣ್ ಚೌಗಲೆ ಮಹಾರಾಷ್ಟ್ರ ಮೂಲದವನಾಗಿದ್ದು, ಮೂರು ತಿಂಗಳು ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡಿದ್ದ. ಬಳಿಕ ಕೆಲಸಕ್ಕೆ ರಾಜೀನಾಮೆ ನೀಡಿ ಏರ್ ಇಂಡಿಯಾ ಕಂಪನಿಯಲ್ಲಿ ಕೆಲಸಕ್ಕೆ ಸೇರಿದ್ದ. ಕೆಲ ವರ್ಷಗಳಿಂದ ಏರ್ ಇಂಡಿಯಾದಲ್ಲಿ ಕ್ಯಾಬಿನ್ ಕ್ರ್ಯೂ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಉಡುಪಿಯ ಮನೆಯೊಂದರಲ್ಲಿ ನ.12ರಂದು ತಾಯಿ ಹಾಗೂ ಮೂವರು ಮಕ್ಕಳನ್ನು ಆರೋಪಿ ಪ್ರವೀಣ್ ಚೌಗಲೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿ ಎಸ್ಕೇಪ್ ಆಗಿದ್ದ. ಹಸೀನಾ, ಅಫ್ನಾನ್, ಅಯ್ನಾಝ್, ಹಾಸಿಂ ಕೊಲೆಯಾದ ದುರ್ದೈವಿಗಳು. ಕೊಲೆ ಬಳಿಕ ಪ್ರವೀಣ್ ಚೌಗಲೆ ಬೆಳಗಾವಿಯ ಕುಡುಚಿಯಲ್ಲಿರುವ ಸಂಬಂಧಿಕರ ಮನೆಯಲ್ಲಿ ತಲೆಮರೆಸಿಕೊಂಡಿದ್ದ. ಮೊಬೈಲ್ ಲೊಕೇಶನ್ ಆಧಾರದ ಮೇಲೆ ಉಡುಪಿ ಪೊಲೀಸರು ನಿನ್ನೆ ಕುಡುಚಿಯಲ್ಲಿ ಆರೋಪಿಯನ್ನು ಬಂಧಿಸಿದ್ದರು.


Bottom Add3
Bottom Ad 2

You cannot copy content of this page