ಪ್ರಗತಿವಾಹಿನಿ ಸುದ್ದಿ; ಉಡುಪಿ: ಬಿಜೆಪಿಯವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಶರಶಯ್ಯೆಯಲ್ಲಿ ಮಲಗಿಸಿದ್ದಾರೆ. ಸಿಎಂ ಯಡಿಯೂರಪ್ಪನವರು ಭೀಷ್ಮಾಪೀತಾಮಹರಂತಾಗಿದ್ದಾರೆ ಎಂದು ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ವ್ಯಂಗ್ಯವಾಡಿದ್ದಾರೆ.
ಶಿರಾ ಉಪಚುನಾವಣೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಶಿರಾದಲ್ಲಿ ಬಿಜೆಪಿಗೆ ಅಭ್ಯರ್ಥಿಯೇ ಇರಲಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಅರ್ಜಿ ಸಲ್ಲಿಸಿದವರನ್ನು ಕರೆದುಕೊಂಡು ಹೋಗಿದ್ದಾರೆ. ಆದರೂ ಕೂಡ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಖಚಿತ ಎಂದರು.
ಇನ್ನು ಸಿಎಂ ಯಡಿಯೂರಪ್ಪ ಭೀಷ್ಮಪಿತಾಮಹರಿಗಿರುವಂತೆ ಇಚ್ಛಾಮರಣವಿರುತ್ತದೆ. ಅವರು ಯಾವತ್ತು ಬೇಕಾದರೂ ಅಧಿಕಾರದಿಂದ ಕೆಳಗಿಳಿಯಬಹುದು. ಉಪಚುನಾವಣೆ ಬಳಿಕ ಬಿಜೆಪಿಯವರೇ ಅವರನ್ನು ಅಧಿಕಾರದಿಂದ ಕಳುಹಿಸುತ್ತಾರೆ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ