Kannada NewsKarnataka NewsLatest

*ಬಿಜೆಪಿ ಮುಖಂಡ, ಖ್ಯಾತ ಉದ್ಯಮಿ ಸುಧಾಕರ ಶೆಟ್ಟಿ ಇನ್ನಿಲ್ಲ*

ಪ್ರಗತಿವಾಹಿನಿ ಸುದ್ದಿ; ಉಡುಪಿ: ಬಿಜೆಪಿ ಹಿರಿಯ ನಾಯಕ, ಖ್ಯಾತ ಉದ್ಯಮಿ ಸುಧಾಕರ್ ಶೆಟ್ಟಿ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ.

ಶಾರದಾ ಇಂಟರ್ ನ್ಯಾಷನಲ್ ಹೋಟೆಲ್ ಮಾಲೀಕರಾಗಿದ್ದ ಸುಧಾಕರ್ ಶೆಟ್ಟಿ ತೀವ್ರ ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.

ಮೂರು ಬಾರಿ ಉಡುಪಿ ವಿಧನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸುಧಾಕರ್ ಶೆಟ್ಟಿ ಎರಡು ಬಾರಿ ಬಿಜೆಪಿ ಹಾಗೂ ಒಂದು ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಆದರೆ ಮೂರು ಬಾರಿಯೂ ಸೋಲನುಭವಿಸಿದ್ದರು. 2009ರಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದರು. ಹೋಟೆಲ್ ಉದ್ಯಮದಲ್ಲಿ ಹೆಚ್ಚು ಹೆಸರುವಾಸಿಯಾಗಿದ್ದರು.


Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button