Latest

*ಧನ್ವಂತರಿ ಆಯುರ್ವೇದ ಆಸ್ಪತ್ರೆಯಲ್ಲಿ ಭಾರಿ ಅಗ್ನಿ ಅವಘಡ*

ಪ್ರಗತಿವಾಹಿನಿ ಸುದ್ದಿ: ಧನ್ವಂತರಿ ಆಯುರ್ವೇದ ಆಸ್ಪತ್ರೆಯ ಕಟ್ಟಡಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.

ಇಲ್ಲಿನ ದೊಡ್ಡನಗುಡ್ಡೆ ಬಬ್ಬುಸ್ವಾಮಿ ದೇಗುಲದ ಬಳಿಯಿರುವ ಧನ್ವಂತರಿ ಆಯುರ್ವೇದ ಆಸ್ಪತ್ರೆಯ ಕಟ್ಟಡಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಆಸ್ಪತ್ರೆಯ ಕಟ್ಟಡದ ಮೇಲ್ಮಹಡಿಯಲ್ಲಿ ಬೆಂಕಿ ಹೊತ್ತಿ ಉರಿಯುತ್ತಿದೆ.

ಆಸ್ಪತ್ರೆಯ ಕಟ್ಟಡದ ನವೀಕರಣ ನಡೆಯುತ್ತಿತ್ತು. ಈ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ರೋಗಿಗಳು ಇರಲಿಲ್ಲ. ಕಟ್ಟಡದ ಮೇಲ್ಮಹಡಿಯಲ್ಲಿ ಶಾರ್ಟ್ ಸರ್ಕ್ಯೂ ನಿಂದ ಬೆಂಕಿ ಸಂಭವಿಸಿದೆ ಎನ್ನಲಾಗಿದೆ. ಕಟ್ಟಡದಲ್ಲಿದ್ದ ಇಬ್ಬರು ಕಾರ್ಮಿಕರು ಪಾರಾಗಿದ್ದಾರೆ.

ಘಟನಾ ಸ್ಥಳಕ್ಕೆ ಅಗ್ನಿಶಾಮ ಸಿಬ್ಬಂದಿ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button