Kannada NewsKarnataka NewsLatest

*ಬಟ್ಟೆ ಮಳಿಗೆಯಲ್ಲಿ ಮಿಸ್ ಫೈರಿಂಗ್; ಓರ್ವನ ಸ್ಥಿತಿ ಗಂಭೀರ*

ಪ್ರಗತಿವಾಹಿನಿ ಸುದ್ದಿ; ಉಡುಪಿ: ಉಡುಪಿ ಜಿಲ್ಲೆಯ ಪ್ರಸಿದ್ಧ ಬಟ್ಟೆ ಮಳಿಗೆಯೊಂದರಲ್ಲಿ ಗನ್ ನಿಂದ ಆಕಸ್ಮಿಕ ಗುಂಡು ಹಾರಿ ವ್ಯಕ್ತಿಯೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಉಡುಪಿ ಜಿಲ್ಲೆಯ ಜಯಲಕ್ಷ್ಮೀ ಸಿಲ್ಕ್ ಮಳಿಗೆಯಲ್ಲಿ ಈ ದುರಂತ ಸಂಭವಿಸಿದೆ. ಯಾರೋ ಒಬ್ಬರು ಬಟ್ಟೆ ಅಂಗಡಿಯಲ್ಲಿ ಗನ್ ಬಿಟ್ಟು ಹೋಗಿದ್ದಾರೆ. ಇದನ್ನು ಗಮನಿಸಿದ ಸಿಬ್ಬಂದಿಗಳು ಗನ್ ಎತ್ತಿ ಪರಿಶೀಲಿಸುತ್ತಿದ್ದಾಗ ಆಕಸ್ಮಿಕವಾಗಿ ಗುಂಡು ಹಾರಿದೆ. ಎದುರಿಗೆ ಇದ್ದ ವ್ಯಕ್ತಿಗೆ ಗುಂಡೇಟು ತಗುಲಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುವನ್ನು ಉಡುಪಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Related Articles

Back to top button