ಪ್ರಗತಿವಾಹಿನಿ ಸುದ್ದಿ; ಉಡುಪಿ: ಜಿಲ್ಲೆಯ ಕಾಲೇಜುಗಳಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ತಾರಕಕ್ಕೇರಿದ್ದು, ಹಿಜಾಬ್ ಧರಿಸಿ ಬಂದ್ ಮುಸ್ಲೀಂ ಯುವತಿಯರನ್ನು ಹಾಗೂ ಕೇಸರಿ ಸಾಲು ಧರಿಸಿ ಆಗಮಿಸಿದ ಹಿಂದೂ ವಿದ್ಯಾರ್ಥಿಗಳನ್ನು ಕಾಲೇಜು ಪ್ರಾಂಶುಪಾಲರು ತಡೆದಿದ್ದಾರೆ.
ಕುಂದಾಪುರದ ಭಂಡಾರ್ಕ್ಸರ್ಸ್ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿಯರು ಇಂದು ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸುತ್ತಿದ್ದಂತೆ, ಕಾಲೇಜು ಗೇಟ್ ಬಳಿಯೇ ತಡೆದು ನಿಲ್ಲಿಸಿದ ಪ್ರಾಂಶುಪಾಲರು, ಕಾಲೇಜಿಗೆ ಹಿಜಾಬ್ ಧರಿಸಿ ಬರಲು ಅವಕಾಶವಿಲ್ಲ, ಕಾಲೇಜಿನ ಸಮವಸ್ತ್ರ ಧರಿಸಿ ಬರುವವರಿಗೆ ಮಾತ್ರ ಕಾಲೇಜು ಪ್ರವೇಶಕ್ಕೆ ಅವಕಾಶ ನೀಡಲಾಗುವುದು ಎಂದು ಹೇಳಿ ಕಾಲೇಜು ಗೇಟ್ ಕ್ಲೋಸ್ ಮಾಡಿ ಖಡಕ್ ಸಂದೇಶ್ ರವಾನಿಸಿದ್ದಾರೆ.
ಈ ನಡುವೆ ನಿನ್ನೆ ಉಡುಪಿಯ ಕಾಲೇಜೊಂದರಲ್ಲಿ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಆಗಮಿಸಿದ್ದರು. ಈ ವೇಳೆ ಕಾಲೇಜು ಆಡಳಿತ ಮಂಡಳಿ ಹಾಗೂ ಪ್ರಾಂಶು ಪಾಲರು ವಿದ್ಯಾರ್ಥಿಗಳು ಕಾಲೇಜಿಗೆ ಯಾವುದೇ ಕೇಸರಿ ಶಾಲು ಅಥವಾ ಹಿಜಾಬ್ ಧರಿಸಿ ಆಗಮಿಸುವಂತಿಲ್ಲ. ಜ್ಞಾನ ದೇಗುಲದಲ್ಲಿ ಧರ್ಮ ಸಂಘರ್ಷಕ್ಕೆ ಅವಕಾಶವಿಲ್ಲ ಎಂದು ಹೇಳಿ ವಿದ್ಯಾರ್ಥಿಗಳನ್ನು ವಾಪಸ್ ಕಳುಹಿಸಲಾಗಿತ್ತು.
ಈ ಬೆಳವಣಿಗೆ ಬೆನ್ನಲ್ಲೇ ಇಂದು ಕುಂದಾಪುರ ಕಾಲೇಜಿನಲ್ಲಿ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿಗಳಿಗೆ ಪ್ರಾಂಶುಪಾಲರು ತಡೆಯೊಡ್ಡಿದ್ದಾರೆ.
ಸಚಿವ ಸ್ಥಾನಕ್ಕಾಗಿ ರಮೇಶ್ ಜಾರಕಿಹೊಳಿ ಹೊಸ ಪ್ಲಾನ್: ಆಕಾಂಕ್ಷಿಗಳ ಪಟ್ಟಿಯಲ್ಲಿ ಯಾರಿದ್ದಾರೆ?
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ