Kannada NewsKarnataka NewsLatest

*ಚೂರಿ ಇರಿತಕ್ಕೊಳಗಾಗಿದ್ದ ರಿಯಲ್ ಎಸ್ಟೇಟ್ ಏಜೆಂಟ್ ಚಿಕಿತ್ಸೆ ಫಲಿಸದೇ ಸಾವು*

ಪ್ರಗತಿವಾಹಿನಿ ಸುದ್ದಿ; ಉಡುಪಿ: ಚೂರಿ ಇರಿತದಿಂದ ಗಂಭೀರವಾಗಿ ಗಾಯಗೊಂಡಿದ್ದ ರಿಯಲ್ ಎಸ್ಟೆಟ್ ಏಜೆಂಟ್, ಬನ್ಸ್ ರಾಘವೇಂದ್ರ ಯಾನೇ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಉಡುಪಿಯಲ್ಲಿ ನಡೆದಿದೆ.

ನಿನ್ನೆ ತಡರಾತ್ರಿ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಚಿಕ್ಕನ್ ಸಾಲ್ ಬಳಿ ಬನ್ಸ್ ರಾಘವೇಂದ್ರ (42)ಗೆ ದುಷ್ಕರ್ಮಿಗಳು ಚೂರಿ ಇರಿದಿದ್ದರು. ಕೈ-ಕಾಲು, ತೊಡೆ ಭಾಗಕ್ಕೆ ಇರಿದು ದುಷ್ಕರ್ಮಿಗಳು ಪರಾರಾಯಾಗಿದ್ದರು. ರಕ್ತದ ಮಡುವಲ್ಲಿ ಬಿದ್ದಿದ್ದ ರಾಘು ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

Home add -Advt

ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಿಗ್ಗೆ ಬನ್ಸ್ ರಾಘು ಯಾನೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ ಶೋಧ ನಡೆಸಿದ್ದಾರೆ.

Related Articles

Back to top button