Uncategorized

*ವರುಣಾರ್ಭಟಕ್ಕೆ ಕಾಲು ಜಾರಿ ನದಿಗೆ ಬಿದ್ದ ವ್ಯಕ್ತಿ ಸಾವು*

ಪ್ರಗತಿವಾಹಿನಿ ಸುದ್ದಿ; ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರಕ್ಕೆ ಜನ ಜೀವನ ಅಸ್ತವ್ಯಸ್ಥಗೊಂಡಿದೆ. ಧಾರಾಕಾರ ಮಳೆಗೆ ವ್ಯಕ್ತಿಯೋರ್ವರು ಕಾಲು ಜಾರಿ ನದಿಗೆ ಬಿದ್ದು ಸಾವನ್ನಪ್ಪಿದ ಘಟನೆ ಉಡುಪಿಯಲ್ಲಿ ನಡೆದಿದೆ.

ಉಡುಪಿಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ವರುಣಾರ್ಭಟಕ್ಕೆ ರಸ್ತೆಗಳು ಜಲಾವೃತಗೊಂಡಿವೆ. ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಈ ನಡುವೆ ದುರಂತವೊಂದು ಸಂಭವಿಸಿದ್ದು, ವ್ಯಕ್ತಿಯೊಬ್ಬರು ಕಾಲು ಜಾರಿ ಕುಬ್ಜಾ ನದಿಗೆ ಬಿದ್ದು, ನೀರುಪಾಲಾಗಿರುವ ಘಟನೆ ನಡೆದಿದೆ.

ಶೇಷಾದ್ರಿ ಐತಾಳ್ (75) ಮೃತ ದುರ್ದೈವಿ. ಕಮಲಶಿಲೆಯ ತಪ್ಪಲು ಪ್ರದೇಶದ ನಿವಾಸಿ. ಮಳೆಯ ಅಬ್ಬರಕ್ಕೆ ಕಾಲು ಜಾರಿ ನದಿಗೆ ಬಿದ್ದು ಸಾವನ್ನಪ್ಪಿದ್ದಾರೆ. ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button