ಪ್ರಗತಿವಾಹಿನಿ ಸುದ್ದಿ; ಉಡುಪಿ: ಹಿಜಾಬ್ ಹಾಗೂ ಕೇಸರಿ ಶಾಲು ಸಂಘರ್ಷ ತಾರಕಕ್ಕೇರಿದ್ದು, ಉಡುಪಿ ಜಿಲ್ಲೆಯ ಮಣಿಪಾಲದ ಎಂಜಿಎಂ ಕಾಲೇಜು ಆವರಣ ಅಕ್ಷರಶ: ರಣಾಂಗಣವಾಗಿದೆ.
ಎಂಜಿಎಂ ಕಾಲೇಜಿನಲ್ಲಿ ಇಂದು ಸೈನ್ಸ್ ವಿಷಯದ ಪರೀಕ್ಷೆ ನಡೆಯುತ್ತಿದ್ದು, ಕೆಲ ಮುಸ್ಲೀಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ್ದಾರೆ. ಈ ವೇಳೆ ಕಾಲೇಜು ಸಿಬ್ಬಂದಿಗಳು ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರನ್ನು ಕಾಲೇಜು ಗೇಟ್ ಬಳಿ ತಡೆದು ನಿಲ್ಲಿಸಿದ್ದಾರೆ. ಆದರೆ ಹಿಜಾಬ್ ಧರಿಸಿ ಬಂದ ಕೆಲ ವಿದ್ಯಾರ್ಥಿನಿಯರಿಗೆ ಪರೀಕ್ಷೆಗೆ ಅವಕಾಶ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ವಿಷಯ ತಿಳಿಯುತ್ತಿದ್ದಂತೆ ಹಿಂದೂ ವಿದ್ಯಾರ್ಥಿನಿಯರು ಕೇಸರಿ ಶಾಲು, ಕೇಸರಿ ಪೇಟಾ ಧರಿಸಿ ಕಾಲೇಜಿಗೆ ಎಂಟ್ರಿಕೊಟ್ಟಿದ್ದಾರೆ.
ಕಾಲೇಜು ಆವರಣದಲ್ಲಿ ಹಿಂದೂ ಹಾಗೂ ಮುಸ್ಲೀಂ ವಿದ್ಯಾರ್ಥಿಗಳ ಹೈಡ್ರಾಮಾ ನಡೆದಿದೆ. ಒಂದೆಡೆ ಹಿಂದೂ ವಿದ್ಯಾರ್ಥಿಗಳು ವಂದೇ ಮಾತರಂ ಎಂದು ಘೋಷಣೆ ಕೂಗುತ್ತಾ ಪ್ರತಿಭಟನೆ ನಡೆಸಿದರೆ ಮತ್ತೊಂದೆಡೆ ಮುಸ್ಲೀಂ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದಾರೆ. ಪರಸ್ಪರ ನೂಕಾಟ-ತಳ್ಳಾಟವೂ ನಡೆದಿದೆ. ವಿದ್ಯಾರ್ಥಿನಿಯರನ್ನು ತಡೆಯಲು ಕಾಲೇಜು ಸಿಬ್ಬಂದಿಗಳು ಹರಸಾಹಸಪಟ್ಟಿದ್ದಾರೆ. ಕಾಲೇಜು ಆವರಣಿದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಇನ್ನೊಂದೆಡೆ ಶಿವಮೊಗ್ಗ, ಮಂಡ್ಯ ಕಾಲೇಜುಗಳಲ್ಲೂ ಹಿಜಾಬ್ ಹಾಗೂ ಕೇಸರಿ ವಿವಾದ ತಾರಕಕ್ಕೇರಿದೆ.
ಧಮ್ ಇದ್ದರೆ ಮಸೀದಿಗೆ ಮಹಿಳೆಯರಿಗೆ ಪ್ರವೇಶ ಕೊಡಿಸಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ