Kannada NewsLatest

*ಬೆಳಗಾವಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ವಿಧಾನಸಭಾ ಚುನಾವಣೆಗೆ ರಾಜ್ಯ ಬಿಜೆಪಿ ಭರ್ಜರಿ ಸಿದ್ಧತೆ ನಡೆಸಿದ್ದು, ಚುನಾವಣಾ ಚಾಣಾಕ್ಯ, ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ಕುಂದಗೋಳದಲ್ಲಿ ರೋಡ್ ಶೋ ಮುಗಿಸಿದ ಬಳಿಕ ಅಮಿತ್ ಶಾ ಕುಂದಾನಗರಿ ಬೆಳಗಾವಿಗೆ ಎಂಟ್ರಿ ಕೊಟ್ಟಿದ್ದಾರೆ.

ಕುಂದಗೋಳದಿಂದ ವಿಶೇಷ ಹೆಲಿಕಾಪ್ಟರ್ ನಲ್ಲಿ ಬೆಳಗಾವಿಯ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿ ಹೆಲಿಪ್ಯಾಡ್ ಗೆ ಆಗಮಿಸಿದ ಅಮಿತ್ ಶಾ ಅವರಿಗೆ ಸಿಎಂ ಬಸವರಾಜ್ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸಾಥ್ ನೀಡಿದರು. ಹೆಲಿಕಾಪ್ಟರ್ ನಿಂದ ಇಳಿಯುತ್ತಿದ್ದಂತೆ ಅಮಿತ್ ಶಾ ನೆರೆದಿದ್ದ ಜನರತ್ತ ಕೈಬೀಸಿ ಜನರ ಅಭಿಮಾನಕ್ಕೆ ಕೈಮುಗಿದರು.

Home add -Advt

ಬೆಳಗಾವಿ ಗ್ರಾಮೀಣ ಭಾಗದಲ್ಲಿ ಜನಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಳ್ಳಲಿರುವ ಅಮಿತ್ ಶಾ, ಬಿಜೆಪಿ ಕಾರ್ಯಕರ್ತರಲ್ಲಿ ಹುರುಪು ತುಂಬಲಿದ್ದಾರೆ. ಚುನಾವಣಾ ಚಾಣಾಕ್ಯನ ಆಗಮನದಿಂದ ಬೆಳಗಾವಿ, ಕಿತ್ತೂರು ಕರ್ನಾಟಕ ಭಾಗದ ಬಿಜೆಪಿ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮನೆ ಮಾಡಿದೆ.

*ಕಾಂಗ್ರೆಸ್ ಭದ್ರ ಕೋಟೆಯಲ್ಲಿ ಅಮಿತ್ ಶಾ ರೋಡ್ ಶೋ; ಕುಂದಗೋಳದಲ್ಲಿ ಕೇಸರಿ ಕಲರವ*

https://pragati.taskdun.com/kundagolaamith-shahroad-showbjp/

Related Articles

Back to top button