*ಉಡುಪಿಯಲ್ಲಿ ನಾಲ್ವರ ಹತ್ಯೆ ಪ್ರಕರಣ; ಆರೋಪಿ ಸಿಆರ್ ಪಿ ಎಫ್ ಸಿಬ್ಬಂದಿ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ/ಉಡುಪಿ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಉಡುಪಿ ಪೊಲೀಸರು ಬೆಳಗಾವಿಯ ಕುಡುಚಿಯಲ್ಲಿ ಬಂದಿಸಿದ್ದಾರೆ.
ನ.12ರಂದು ಉಡುಪಿಯಲ್ಲಿ ತಾಯಿ ಹಾಗೂ ಮೂವರು ಮಕ್ಕಳನ್ನು ಚಾಕುವಿನಿಂದ ಇರಿದು ಹತ್ಯೆಗೈದು ಹಂತಕ ಪರಾರಿಯಾಗಿದ್ದ. ಘಟನೆಯಲ್ಲಿ ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದರು. ಆರೋಪಿ ಪತ್ತೆಗಾಗಿ ಉಡುಪಿ ಪೊಲೀಸರು ಬಲೆ ಬೀಸಿದ್ದರು.
ಇದೀಗ ಆರೋಪಿಯನ್ನು ಬೆಳಗಾವಿ ಜಿಲ್ಲೆಯ ಕುಡುಚಿಯಲ್ಲಿ ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಪ್ರವೀಣ್ ಚೌಗಲೆ ಎಂದು ಗುರುತಿಸಲಾಗಿದ್ದು, ಸಿಆರ್ ಪಿ ಎಫ್ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದ. ಮಹಾರಾಷ್ಟ್ರದ ಸಾಂಗ್ಲಿ ಮೂಲದವನು ಎಂದು ತಿಳಿದುಬಂದಿದೆ.
ಮೊಬೈಲ್ ಟವರ್ ಲೊಕೇಶನ್ ಆಧಾರದ ಮೇಲೆ ಆರೋಪಿಯನ್ನು ಬಂಧಿಸಲಾಗಿದೆ. ಅನೈತಿಕ ಸಂಬಂಧದಿಂದ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ನ.12ರಂದು ಉಡುಪಿಯ ನೇಜಾರು ಬಳಿಯ ತೃಪ್ತಿ ಲೇಔಟ್ ನ ಮನೆಯೊಂದರಲ್ಲಿ ತಾಯಿ ಹಾಗೂ ಮೂವರು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಹಸೀನಾ, ಅಫ್ನಾನ್, ಅಯ್ನಾಝ್, ಹಾಸಿಂ ಕೊಲೆಯಾದ ದುರ್ದೈವಿಗಳು. ತನಿಖೆಯಿಂದಷ್ಟೇ ಕೊಲೆಯ ನಿಖರ ಕಾರಣ ತಿಳಿದುಬರಬೇಕಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ