Kannada NewsKarnataka NewsLatest

*ಉಡುಪಿಯಲ್ಲಿ ನಾಲ್ವರ ಹತ್ಯೆ ಪ್ರಕರಣ; ಆರೋಪಿ ಸ್ಥಳಮಹಜರು ವೇಳೆ ಉದ್ರಿಕ್ತರಿಂದ ರಸ್ತೆ ತಡೆ; ಲಾಠಿ ಪ್ರಹಾರ*

ಪ್ರಗತಿವಾಹಿನಿ ಸುದ್ದಿ; ಉಡುಪಿ: ಉಡುಪಿ ಜಿಲ್ಲೆಯ ನೇಜಾರುವಿನಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸ್ಥಳಮಹಜರು ವೇಳೆ ಮೃತರ ಸಂಬಂಧಿಕರು, ಸ್ಥಳೀಯರು ರಸ್ತೆ ತಡೆ ನಡೆಸಿ ಆರೋಪಿಯನ್ನು ತಮಗೊಪ್ಪಿಸುವಂತೆ ಪಟ್ಟು ಹಿಡಿದ ಘಟನೆ ನಡೆದಿದೆ.

Home add -Advt

ಇಂದು ಸಂಜೆ ಘಟನೆ ನಡೆದ ಸ್ಥಳದಲ್ಲಿ ಆರೋಪಿ ಪ್ರವೀಣ್ ಚೌಗಲೆ ತೋರಿಸಿಕೊಟ್ಟ ಸ್ಥಳ ಮಹಜರು ಮಾಡಲು ಆತನನ್ನು ಕರೆದುಕೊಂಡು ಹೋದ ಸಮಯದಲ್ಲಿ, ಮೃತರ ಸಂಬಂಧಿಗಳು ಹಾಗೂ ಸ್ನೇಹಿತರು, ಸ್ಥಳೀಯರು ಆರೋಪಿಯ ವಿರುದ್ದ ಫೋಷಣೆ ಕೂಗಿ ಮಹಜರು ಮುಗಿಸಿ ವಾಪಾಸು ಹೊರಡುವ ಸಮಯದಲ್ಲಿ ವಾಹನವನ್ನು ತಡೆದು ನಿಲ್ಲಿಸುವ ಪ್ರಯತ್ನ ಮಾಡಿದ್ದಾರೆ.

ಈ ಸಮಯದಲ್ಲಿ ಪೊಲೀಸರು ಉದ್ರಿಕ್ತರನ್ನು ಚದುರಿಸಲು ಲಘು ಲಾಠಿ ಪ್ರಹಾರ ಮಾಡಿ ಜನರನ್ನು ಚದುರಿಸಿದರು. ಆರೋಪಿಯನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ದು ವಿಚಾರಣೆ ನಡೆಸಲಾಗಿದೆ.

ಪ್ರಸ್ತುತ ಪರಿಸ್ಥಿತಿ ಶಾಂತವಾಗಿದ್ದು, ಸಮುದಾಯದ ಹಿರಿಯರೊಂದಿಗೆ ಚರ್ಚಿಸಿ ಶಾಂತಿ ಕಾಪಾಡುವಂತೆ ಮನವಿ ಮಾಡಲಾಗಿದೆ ಎಂದು ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಮಹಿತಿ ನೀಡಿದ್ದಾರೆ.


Related Articles

Back to top button