ಪ್ರಗತಿವಾಹಿನಿ ಸುದ್ದಿ; ಉಡುಪಿ: ಧಾರಾಕಾರ ಮಳೆ ಸುರಿಯುತ್ತಿದ್ದರೂ ಕರುಣೆಯಿಲ್ಲದೇ ನವಜಾತ ಶಿಶುವನ್ನು ಹೆತ್ತ ತಾಯಿ ಕಸದ ಬುಟ್ಟಿಯಲ್ಲಿ ಎಸೆದು ಹೋಗಿರುವ ಅಮಾನುಷ ಘಟನೆ ಉಡುಪಿ ಜಿಲ್ಲೆಯ ಚಿತ್ತರಂಜನ್ ಸರ್ಕಲ್ ಬಳಿ ನಡೆದಿದೆ.
ಹೋಟೆಲೊಂದರ ಮುಂಭಾಗದ ಕಸದ ಬುಟ್ಟಿಗೆ ಪಾಪಿಗಳು ಮಾನವೀಯತೆ ಮರೆತು ಮಗು ಬಿಸಾಕಿ ಪರಾರಿಯಾಗಿದ್ದಾರೆ. ಇಂದು ಬೆಳಗ್ಗೆ ಉಡುಪಿ ನಗರಸಭೆಯ ಪೌರಕಾರ್ಮಿಕರು ಕಸ ಕೊಂಡೊಯ್ಯಲು ಬಂದಾಗ ಕಸದಬುಟ್ಟಿಯಲ್ಲಿ ಅಳುತ್ತಿರುವ ಮಗುವನ್ನು ನೋಡಿದ್ದಾರೆ.
ಮಗು ಇಂದು ಬೆಳಗ್ಗೆ ಹುಟ್ಟಿದ್ದು ಮಗುವಿನ ಕರುಳಬಳ್ಳಿಯನ್ನು ಕೂಡ ಕತ್ತರಿಸಲಾಗಿಲ್ಲ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಉಡುಪಿ ಜಿಲ್ಲಾ ನಾಗರಿಕ ಸಮಿತಿ ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಒಳಕಾಡು, ಮಗುವನ್ನು ಉಡುಪಿ ಜಿಲ್ಲಾ ಕೂಸಮ್ಮ ಶಂಭು ಶೆಟ್ಟಿ ಹಾಜಿ ಅಬ್ದುಲ್ಲಾ ಸರ್ಕಾರಿ ಮಹಿಳಾ ಹೆರಿಗೆ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಹೆಣ್ಣು ಮಗುವೆಂದು ನವಜಾತ ಶಿಶುವನ್ನು ಕಸದಬುಟ್ಟಿಗೆ ಎಸೆದಿರುವ ಸಾಧ್ಯತೆ ಇದೆ. ಸದ್ಯ ಮಗು ಹೆರಿಗೆ ಆಸ್ಪತ್ರೆಯಲ್ಲಿ ಆರೋಗ್ಯವಾಗಿದೆ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ