
ಪ್ರಗತಿವಾಹಿನಿ ಸುದ್ದಿ; ಮೈಸೂರು: ಈ ಬಾರಿಯ ಕೋವಿಡ್ ರೂಪಾಂತರಿಯಿಂದ ಹೆಚ್ಚಿನ ಸಾವು ನೋವುಗಳನ್ನು ತಪ್ಪಿಸುವ ಸಲುವಾಗಿ ಹಾಗೂ ಹೊಸ ವರ್ಷ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸದ್ಯದ ಪರಿಸ್ಥಿತಿ ಗಮನಿಸುತ್ತಿದ್ದರೆ ನಿಯಂತ್ರಣದಲ್ಲಿದೆ. ಇದಕ್ಕಿಂತ ಹೆಚ್ಚಿನ ಪ್ರಕರಣಗಳನ್ನು ತಡೆಗಟ್ಟಲು ಮುಂಜಾಗ್ರತ ಕ್ರಮಗಳನ್ನು ಕೈಗೊಂಡಿದ್ದರೂ ಸಹ ನೈಟ್ ಕರ್ಫ್ಯೂ ಅನ್ನು ರಾತ್ರಿ 10 ಗಂಟೆಯಿಂದ ಬೆಳಗಿನ ಜಾವ 05 ಗಂಟೆಯವರೆಗೆ ಜಾರಿ ಮಾಡಲಾಗಿದೆ ಎಂದರು.
ಉದ್ಯಮಗಳ ನಷ್ಟ ತಪ್ಪಿಸಲು ಈ ಕೋವಿಡ್ ನಿಯಂತ್ರಣ ಕ್ರಮಗಳನ್ನು ಪರಿಷ್ಕರಿಸಲಾಗುತ್ತದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಅಂತಹ ಯಾವ ಮರುಪರಿಷ್ಕರಣೆ ಮಾಡುವುದಿಲ್ಲ ಎಂದರು.
ಸುತ್ತೂರು ಶ್ರೀಗಳಾದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ, ಶಾಸಕರಾದ ಎಸ್.ಎ.ರಾಮದಾಸ್, ಎಲ್. ನಾಗೇಂದ್ರ, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಪೊಲೀಸ್ ಉಪ ಆಯುಕ್ತರಾದ ಪ್ರದೀಪ್ ಗುಂಟಿ, ಗೀತಾ ಪ್ರಸನ್ನ, ಸೇರಿದಂತೆ ಇತರರು ಹಾಜರಿದ್ದರು.
ಮುಂದಿನ ದಿನಗಳಲ್ಲಿ ಕೋವಿಡ್ ಸಮಸ್ಯೆಗಳನ್ನು ಎದುರಿಸಲು ಸರ್ಕಾರ ಸನ್ನದ್ಧವಾಗಿದೆ: ಸಿಎಂ ಬಸವರಾಜ ಬೊಮ್ಮಾಯಿ