*BREAKING: ಮಾಜಿ ಸಚಿವ ರಮಾನಾಥ್ ರೈ ಪ್ರಯಾಣಿಸುತ್ತಿದ್ದ ಕಾರು ಅಪಘಾತ*

ಪ್ರಗತಿವಾಹಿನಿ ಸುದ್ದಿ: ಉಡುಪಿ: ಮಾಜಿ ಸಚಿವ ರಮಾನಾಥ್ ರೈ ಪ್ರಯಾಣಿಸುತ್ತಿದ್ದ ಕಾರು ಹಾಗೂ ಖಾಸಗಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಸಾಣೂರಿನಲ್ಲಿ ಈ ಅಪಘಾತ ನಡೆದಿದೆ. ರಮಾನಾಥ್ ರೈ ಪ್ರಯಾಣಿಸುತ್ತಿದ್ದ ಕಾರು ಹಾಗೂ ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನೊಳಗಿದ್ದ ಮಾಜಿ ಸಚಿವ ರಮಾನಾಥ್ ರೈ ಅದೃಷ್ಟವಶಾತ್ ಕೂದಲೆಳೆ ಅಂತರದಿಂದ ಪಾರಾಗಿದ್ದಾರೆ. ಆದರೆ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅಪಘಾತದಲ್ಲಿ … Continue reading *BREAKING: ಮಾಜಿ ಸಚಿವ ರಮಾನಾಥ್ ರೈ ಪ್ರಯಾಣಿಸುತ್ತಿದ್ದ ಕಾರು ಅಪಘಾತ*