Kannada NewsKarnataka NewsLatest

*BREAKING: ಕಂದಕಕ್ಕೆ ಉರುಳಿದ ಶಾಲಾ ಬಸ್: 7 ಮಕ್ಕಳಿಗೆ ಗಂಭೀರ ಗಾಯ*

ಪ್ರಗತಿವಾಹಿನಿ ಸುದ್ದಿ: ಚಾಲಕನ ನಿಯಂತ್ರಣ ತಪ್ಪಿದ ಶಾಲಾ ಬ್ಸ್ ವೊಂದು ಕಂದಕಕ್ಕೆ ಉರುಳಿ ಬಿದ್ದಿದ್ದು, ಮಗು ಸೇರಿ ಏಳು ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

Home add -Advt

ಉಡುಪಿ ಜಿಲ್ಲೆಯ ಮಣಿಪಾಲದ ಕೊಡಂಗೆ ಬಳಿ ಈ ಅವಘಡ ಸಂಭವಿಸಿದೆ. ಮಣಿಪಾಲದ ಕ್ರಿಸ್ಟ್ ಸ್ಕೂಲ್ ಗೆ ಸೇರಿದ ಬಸ್ ಇದಾಗಿದೆ. ಶಾಲೆಗೆ ಮಕ್ಕಳನ್ನು ಬಿಡಲೆಂದು ಕರೆದೊಯ್ಯುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿದ ಬಸ್ ಪಲ್ಟಿಯಾಗಿದೆ. ಘಟನೆಯಲ್ಲಿ ಏಳು ಮಕ್ಕಳು ಗಾಯಗೊಂಡಿದ್ದಾರೆ.

ಮಕ್ಕಳನ್ನು ರಕ್ಷಿಸಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶಿಲನೆ ನಡೆಸಿದ್ದಾರೆ.\

Related Articles

Back to top button