EducationKannada NewsKarnataka NewsLatest
*ಉಡುಪಿಯ ಬನ್ನಂಜೆ ಬಳಿಯ ಸರ್ಕಾರಿ ಹಾಸ್ಟೇಲ್ ಗೆ ಸಿಎಂ ಸಿದ್ದರಾಮಯ್ಯ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ*

ಪ್ರಗತಿವಾಹಿನಿ ಸುದ್ದಿ; ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ರೂ ಆಗಿರುವ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಇಂದು ಉಡುಪಿಯ ಬನ್ನಂಜೆ ಬಳಿಯ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿದರು.
ಉಡುಪಿಯ ಬನ್ನಂಜೆಯಲ್ಲಿರುವ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿದರು.

ಈ ವೇಳೆ ವಿದ್ಯಾರ್ಥಿನಿಯರ ಜೊತೆ ಕುಂದು ಕೊರತೆಗಳ ಬಗ್ಗೆ ವಿಚಾರಿಸಿದರು. ಅಲ್ಲದೆ ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆಗಳಾಗದಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ