Latest

ಪತ್ರಕರ್ತ ಅರ್ನಬ್ ಗೋಸ್ವಾಮಿ ಪೊಲೀಸ್ ವಶಕ್ಕೆ

ಪ್ರಗತಿವಾಹಿನಿ ಸುದ್ದಿ, ಮುಂಬೈ – ಖ್ಯಾತ ಪತ್ರಕರ್ತ, ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಬ್ ಗೋಸ್ವಾಮಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇಂದು ಮುಂಜಾನೆ ಅವರ ನಿವಾಸದ ಮೇಲೆ ದಾಳಿ ನಡೆಸಿದ ಮುಂಬೈ ಪೊಲೀಸರು ಅರ್ನಬ್ ಅವರನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ.

ಅರ್ನಬ್ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ರಿಪಬ್ಲಿಕ್ ಟಿವಿ ವರದಿ ಮಾಡಿದೆ.

ಟಿಆರ್ಪಿ ಹಗರಣಕ್ಕೆ ಸಂಬಂಧಿಸಿದಂತೆ ಅರ್ನಬ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈಗಾಗಲೆ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮರಾಠಿ ಚಾನೆಲ್ ಸಂಪಾದಕರನ್ನು ಪೊಲೀಸರು ಬಂಧಿಸಿದ್ದರು.

Home add -Advt

ಆದರೆ ಅರ್ನಬ್ ಟಿಆರ್ ಪಿ ಹಗರಣವನ್ನು ಸ್ಪಷ್ಟವಾಗಿ ನಿರಾಕರಿಸಿ, ಈ ಸಂಬಂಧ ದಾಖಲೆಗಳನ್ನೂ ಸಲ್ಲಿಸಿದ್ದರು. ಮುಂಬಾ ಪೊಲೀಸರು ಅನಗತ್ಯವಾಗಿ ಅಲ್ಲಿನ ಸರಕಾರದ ಕುಮ್ಮಕ್ಕಿನಿಂದ ತಮಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದರು.

Related Articles

Back to top button