Kannada NewsKarnataka NewsLatestPolitics

*ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹುಟ್ಟುಹಬ್ಬ: ಶ್ರವಣದೋಷವುಳ್ಳ ವಸತಿ ಶಾಲೆಯ ಮಕ್ಕಳಿಗೆ ನೋಟ್ ಬುಕ್, ಊಟ ವಿತರಣೆ*

ಪ್ರಗತಿವಾಹಿನಿ ಸುದ್ದಿ: ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರವರ ಜನ್ಮದಿನದ ಹಿನ್ನೆಲೆಯಲ್ಲಿ ಶ್ರವಣದೋಷವುಳ್ಳ ಮಕ್ಕಳ ವಸತಿ ಶಾಲೆ ಯ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ ಮಾಡಲಾಯಿತು.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಬೈಂದೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಶೇಖರ್ ಪೂಜಾರಿ ನೇತೃತ್ವದಲ್ಲಿ ಉಡುಪಿ ಜಿಲ್ಲೆ ಕುಂದಾಪುರ ತಾಲೂಕು ಮೂಡುಬಗೆಯ ವಾಗ್ಜ್ಯೋತಿ ಶ್ರವಣದೋಷವುಳ್ಳ ಮಕ್ಕಳ ವಸತಿ ಶಾಲೆಯ ಮಕ್ಕಳಿಗೆ ನೋಟ್ ಬುಕ್ ವಿತರಣೆ ಹಾಗೂ ಮಧ್ಯಾಹ್ನದ ಊಟ ವಿತರಿಸುವ ಮುಲಕ ಆಚರಿಸಲಾಯಿತು.

Home add -Advt

ಶ್ರವಣದೋಷವುಳ್ಳ ಮಕ್ಕಳಿಂದ ಸಚಿವರಿಗೆ ವಿಷ್
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಶ್ರವಣದೋಷವುಳ್ಳ ಮಕ್ಕಳು ವಿಡಿಯೋ ಕಾಲ್ ಮೂಲಕ ಜನ್ಮದಿನದ ಶುಭಕೋರಿದರು. ಇದೇ ವೇಳೆ ಮಾತನಾಡಿದ ಶೇಖರ್ ಪೂಜಾರಿ, ಲಕ್ಷ್ಮಿ ಹೆಬ್ಬಾಳ್ಕರ್ ಉಡುಪಿ ಜಿಲ್ಲೆಗೆ ಉಸ್ತುವಾರಿ‌ ಸಚಿವೆಯಾದ ಬಳಿಕ ಕಾಂಗ್ರೆಸ್ ಪಕ್ಷದಲ್ಲಿ ಬದಲಾವಣೆ ಗಾಳಿ ಬೀಸಿದ್ದು, ಅವರ ಮಾರ್ಗದರ್ಶನದಲ್ಲಿ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಇನ್ನಷ್ಟು ಸದೃಢವಾಗಲಿದೆ ಎಂದರು. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ರಾಜಕೀಯ ಕ್ಷೇತ್ರದಲ್ಲಿ ಇನ್ನೂ ಉನ್ನತ ಸ್ಥಾನಕ್ಕೇರಲಿ ಎಂದು ಹಾರೈಸಿದರು.

ಇದೇ ವೇಳೆ ವಂಡ್ಸೆ ಬ್ಲಾಕ್ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ, ಬೈಂದೂರು ಬ್ಲಾಕ್ ಅಧ್ಯಕ್ಷ ಅರವಿಂದ್ ಪೂಜಾರಿ, ಸುಬ್ರಹ್ಮಣ್ಯ ಭಟ್, ಕಿರಣ್ ಹೆಗ್ಡೆ, ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.


Related Articles

Back to top button