ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯು ನ. 15 ರಂದು ಬೆಳಿಗ್ಗೆ 10.00 ಕ್ಕೆ ರಾಷ್ಟ್ರೀಯ ವೃತ್ತಿ ಸೇವೆ(ಎನ್ಸಿಎಸ್) ಯೋಜನೆಯಡಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ, 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಉದ್ಯೋಗ ಮೇಳದಲ್ಲಿ ಪ್ರತಿಷ್ಟಿತ ಖಾಸಗಿ ಕಂಪೆನಿಗಳು ಭಾಗವಹಿಸಲಿದ್ದು ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಯಾವುದೇ ಪದವಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ತಮ್ಮ ಬಯೋಡೇಟಾ(ರೆಸ್ಯೂಮ್) ಮತ್ತು ಆಧಾರ್ ಕಾರ್ಡ್ ಪ್ರತಿ ತೆಗೆದುಕೊಂಡು ಸಂದರ್ಶನದಲ್ಲಿ ಭಾಗವಹಿಸಬಹುದು.
ಪ್ರವೇಶ ಉಚಿತವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಶಿವಮೊಗ್ಗ ದೂ.ಸಂ: 08182-255293, 9380663606 / 9482023412 ನ್ನು ಸಂಪರ್ಕಿಸುವಂತೆ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
ಭವ್ಯ ಭಾರತದ ಇತಿಹಾಸ ಅರಿಯುವಲ್ಲಿ ಎಡವಿದ ಜನತೆ
https://pragati.taskdun.com/article/people-who-have-stumbled-in-understanding-the-history-of-great-india/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ