ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ಜಿಲ್ಲೆ ಮಹಿಳಾ ಅಭಿವೃದ್ಧಿ ನಿಗಮದಿಂದ ೨೦೨೧-೨೨ ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ಬಳಕೆಯಾಗದ ಅನುದಾನದಡಿ ಉದ್ಯೋಗಿನಿ ಯೋಜನೆಯಡಿ ಪರಿಶಿಷ್ಟ ಪಂಗಡದ – ಗುರಿ ೧೮ ಇದ್ದು ಫಲಾನುಭವಿಗಳ ಆಯ್ಕೆ ಸಂಬಂಧವಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪರಿಶಿಷ್ಟ ಪಂಗಡದ ಮಾಜಿ ದೇವದಾಸಿ, ಹಾಗೂ ಅವರ ಮಗಳು, ದಮನಿತ ಮಹಿಳೆಯರಿಗೆ ಆದ್ಯತೆ ನೀಡಲಾಗಿದೆ. ಸ್ವಂತ ಉದ್ಯೋಗ ಕೈಗೊಳ್ಳಬಯಸುವ ಆಸಕ್ತ ಮಹಿಳೆಯರು ಸಂಬಂಧಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಿಂದ ಅರ್ಜಿಗಳನ್ನು ಪಡೆದು ಅಗತ್ಯ ದಾಖಲೆಗಳನ್ನು ಲಗತ್ತಿಸಿ ಭರ್ತಿ ಮಾಡಿದ ಅರ್ಜಿಗಳನ್ನು ದಿನಾಂಕ ೨೦.೦೯.೨೦೨೨ ರೊಳಗಾಗಿ ಸಂಬಂಧಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಾಯಂಕಾಲ ೫.೩೦ ರೊಳಗಾಗಿ ಸಲ್ಲಿಸಲು ತಿಳಿಸಲಾಗಿದೆ.
ಸಾಲ ಪಡೆಯಲು ಅರ್ಹತೆಗಳು:
ಅರ್ಜಿದಾರಳು ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳಾಗಿರಬೇಕು. ಅರ್ಜಿದಾರಳು ೧೮ ರಿಂದ ೫೫ ವರ್ಷದೊಳಗಿರಬೇಕು. ಅರ್ಜಿದಾರಳು ರಾಷ್ಟ್ರೀಕೃತ ಬ್ಯಾಂಕ್ ಖಾತೆಯನ್ನು ಹೊಂದಿದ್ದು, ಚಾಲ್ತಿಯಲ್ಲಿರಬೇಕು. ಜಾತಿ ಹಾಗೂ ಆದಾಯ ಪ್ರಮಾಣ ಪತ್ರ (ಆದಾಯ ಮಿತಿ ರೂ. ಎರಡು ಲಕ್ಷ ಮೀರಿರಬಾರದು) ಯೋಜನಾ ವರದಿ ಲಗತ್ತಿಸುವುದು.
ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲಾತಿಗಳು:
ಪರಿಶಿಷ್ಟ ಪಂಗಡ ಜಾತಿ ಪ್ರಮಾಣ ಪತ್ರ. ಸಂಬಂಧಿಸಿದವರು ಮಾತ್ರ – ಮಾಜಿ ದೇವದಾಸಿ ಹಾಗೂ ಅವರ ಹೆಣ್ಣು ಮಕ್ಕಳಿಗೆ, (ಯೋಜನಾಧಿಕಾರಿಗಳು ದೇವದಾಸಿ ಪುನರ್ವಸತಿ ಯೋಜನೆ ಬೆಳಗಾವಿ ಇವರಿಂದ ಪ್ರಮಾಣ ಪತ್ರ) ದಮನಿತ ಮಹಿಳೆಯರು (ಸಮುದಾಯ ಆಧಾರಿತ ಸಂಸ್ಥೆಯವರಿಂದ ಪ್ರಮಾಣ ಪತ್ರ) ಕುಟುಂಬ ವಾರ್ಷಿಕ ಆದಾಯ ಪ್ರಮಾಣ ಪತ್ರ ವಿಳಾಸದ ದಾಖಲೆಗಳು (ಮತದಾರರ ಗುರುತಿನ ಚೀಟಿ / ಆಧಾರ್‌ಕಾರ್ಡ್ / ಪಡಿತರಚೀಟಿ / ಯಾವುದಾದರೊಂದು ದಾಖಲೆ ಸಲ್ಲಿಸುವುದು. ಯೋಜನಾ ವರದಿ (ಅರ್ಜಿಯಲ್ಲಿ ನೀಡಿರುವಂತೆ ತುಂಬಿ ಸಲ್ಲಿಸತಕ್ಕದ್ದು) ತರಬೇತಿ ಅಥವಾ ಅನುಭವ ಪತ್ರ. ದ್ವಿ ಪ್ರತಿಯಲ್ಲಿ ಭರ್ತಿ ಮಾಡಿದ ಅರ್ಜಿ. ರಾಷ್ಟ್ರೀಕೃತ ಬ್ಯಾಂಕಿನಲ್ಲಿ ತೆರೆಯಲಾದ ಬ್ಯಾಂಕ್ ಖಾತೆಯ ಪುಸ್ತಕದ ನಕಲು ಪ್ರತಿ ಮತ್ತು ಬ್ಯಾಂಕಿನ ಹೆಸರು, ಐ.ಎಫ್.ಎಸ್.ಸಿ. ಕೋಡ್‌ನ ದಾಖಲೆ. ರಹವಾಸಿ ಪ್ರಮಾಣ ಪತ್ರ, ಶಿಕ್ಷಣಕ್ಕೆ ಸಂಬಂಧಿಸಿದ ದಾಖಲಾತಿ ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿಕ್ಷಣ ಪಡೆಯುವ ಹಂತದಲ್ಲಿ ಬೇರೆ ವ್ಯಸನಗಳಿಗೆ ಬಲಿಯಾಗದಿರಿ – ಚನ್ನರಾಜ ಹಟ್ಟಿಹೊಳಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ