
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಯುಗಾದಿ ಹಬ್ಬದ ದಿನದಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾರ್ಚ್ 22ರಂದು ಯುಗಾದಿ ಹಬ್ಬದ ದಿನದಂದು ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಎಂದರು.
ಇನ್ನು ನಂಜನಗೂಡು ಟಿಕೆಟ್ ಗೊಂದಲ ವಿಚಾರವಾಗಿ ನಂಜನಗೂಡಿನಿಂದ ಹೆಚ್.ಸಿ.ಮಹದೇವಪ್ಪ ಸ್ಪರ್ಧೆ ಮಾಡಲ್ಲ ಎಂದಿದ್ದಾರೆ. ಹಾಗಾಗಿ ಆರ್.ಧ್ರುವನಾರಾಯಣ ಪುತ್ರ ದರ್ಶನ್ ಗೆ ನಂಜನಗೂಡು ಟಿಕೆಟ್ ಕೊಡುತ್ತೇವೆ. ನಾನು ಧ್ರುವನಾರಾಯಣ ಪುತ್ರನ ಪರ ಇದ್ದೇನೆ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ