
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಶೀಘ್ರ 17ನೇ ಕಂತಿನ ಗೃಹ ಲಕ್ಷ್ಮಿ ಹಣ ಬಿಡುಗಡೆ ಮಾಡುವುದಾಗಿ ಗೃಹಲಕ್ಷ್ಮೀ ಫಲಾನುಭವಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಸಿಹಿಸುದ್ದಿ ನೀಡಿದ್ದಾರೆ.
ಇದೀಗ 16 ಕಂತಿನ ಹಣವನ್ನ ಬಿಡುಗಡೆ ಮಾಡಿದ್ದು ಜನವರಿ ಹಾಗೂ ಫೆಬ್ರವರಿ ತಿಂಗಳ ಗೃಹಲಕ್ಷ್ಮಿ ಹಣ ಒಂದೇ ಸಲಕ್ಕೆ ಹಾಕಲಾಗುತ್ತದೆ.
ಮಾರ್ಚ್ 31ರ ನಂತರ ಎರಡು ತಿಂಗಳ ಹಣವನ್ನು ಒಂದೇ ಸಲಕ್ಕೆ ಹಾಕುವುದಾಗಿ ಈ ಬಗ್ಗೆ ಸ್ವತಃ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಳರ್ ಅವರು ಸೀಮಂತ ಕಾರ್ಯಕ್ರಮದಲ್ಲಿ ಸ್ಪಷ್ಟಪಡಿಸಿದ್ದಾರೆ.