
ಪ್ರಗತಿವಾಹಿನಿ ಸುದ್ದಿ; ಕೀವ್: ಉಕ್ರೇನ್ ಮೇಲೆ 9ನೇ ದಿನವೂ ರಷ್ಯಾ ಭೀಕರ ದಾಳಿ ಮುಂದುವರೆಸಿದ್ದು, ಕೀವ್, ಖಾರ್ಕೀವ್, ಒಲಿವಿಯಾ, ಮೆರಿಯೊಪೋಲ್ ಸೇರಿದಂತೆ ಹಲವು ನಗರಗಳಲ್ಲಿ ಕ್ಷಿಪಣಿ, ಬಾಂಬ್ ದಾಳಿ ನಡೆಸಿದೆ. ಈ ನಡುವೆ ಉಕ್ರೇನ್ ಪರಮಾಣು ವಿದ್ಯುತ್ ಸ್ಥಾವರದ ಮೇಲೆ ಕ್ಷಿಪಣಿ ದಾಳಿ ನಡೆಸಿದ್ದು, ನ್ಯೂಕ್ಲಿಯರ್ ಪವರ್ ಪ್ಲಾಂಟ್ ಬಳಿ ಭಾರಿ ಸ್ಫೋಟ ಸಂಭವಿಸಿದೆ.
ಯುರೋಪ್ ನ ಅತಿ ದೊಡ್ಡ ಪರಮಾಣು ವಿದ್ಯುತ್ ಸ್ಥಾವರ ಎಂದೇ ಕರೆಯಲ್ಪಡುವ ಝಪೊರಿಝಿಯಾ ಪರಮಾಣು ಅಣುಸ್ಥಾವರದ ಬಳಿ ದಾಳಿ ನಡೆಸಿದ್ದು, ಸ್ಫೋಟದ ತೀವ್ರತೆಗೆ ಬೆಂಕಿ ಹೊತ್ತಿಕೊಂಡಿದೆ. ಪರಮಾಣು ಸೋರಿಕೆಯಾಗುವ ಆತಂಕ ಎದುರಾಗಿದ್ದು, ಬೆಂಕಿ ನಂದಿಸಲು ಕೂಡ ರಷ್ಯಾ ಸೇನೆ ಅವಕಾಶ ನೀಡುತ್ತಿಲ್ಲ ಎಂದು ಉಕ್ರೇನ್ ಸೇನೆ ತಿಳಿಸಿದೆ.
ಉಕ್ರೇನ್ ಪರಮಾಣು ವಿದ್ಯುತ್ ಸ್ಥಾವರದ ಮೇಲೆ ರಷ್ಯಾ ದಾಳಿ ಬೆನ್ನಲ್ಲೇ ಅಂತರಾಷ್ಟ್ರೀಯ ಪರಮಾಣು ಶಕ್ತಿ ಸಂಸ್ಥೆಯೊಂದಿಗೆ ಉಕ್ರೇನ್ ಅಧ್ಯಕ್ಷ ವೊಲೊಡೊಮಿರ್ ಝೆಲೆನ್ಸ್ಕಿ ಚರ್ಚೆ ನಡೆಸಿದ್ದಾರೆ. ರಷ್ಯಾ ದಾಳಿ ಬಳಿಕ ಅಣುಸ್ಥಾವರದ ಬಳಿ ಬೆಂಕಿ ಕಾಣಿಸಿಕೊಂಡಿದೆ. ಆದರೆ ಸ್ಥಾವರದ ಅಗತ್ಯ ಉಪಕರಣಗಳಿಗೆ ಹಾನಿಯಾಗಿಲ್ಲ, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ತಿಳಿಸಿದ್ದಾರೆ.
ಈನಡುವೆ ಚರ್ನಿಹಿವ್ ನ ಜನವಸತಿ ಪ್ರದೇಶದಲ್ಲಿ ರಷ್ಯಾ ನಡೆಸಿದ ಶೆಲ್ ದಾಳಿಗೆ 33 ಜನರು ಬಲಿಯಾಗಿದ್ದು, 18 ಜನರು ಗಾಯಗೊಂಡಿದ್ದಾರೆ ಎಂದು ಉಕ್ರೇನ್ ತಿಳಿಸಿದೆ.
ಮತ್ತೋರ್ವ ಭಾರತೀಯ ವಿದ್ಯಾರ್ಥಿ ಮೇಲೆ ಗುಂಡಿನ ದಾಳಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ