ಪ್ರಗತಿವಾಹಿನಿ ಸುದ್ದಿ; ಬೆಂಗಳೂರು; ಯುದ್ಧದಿಂದ ತತ್ತರಿಸಿರುವ ಉಕ್ರೇನ್ ನಲ್ಲಿ ಸಂಕಷ್ಟಕ್ಕೀಡಾಗಿದ್ದ ರಾಜ್ಯದ 694 ರಾಜ್ಯದ ವಿದ್ಯಾರ್ಥಿಗಳ ಪೈಕಿ 86 ವಿದ್ಯಾರ್ಥಿಗಳು ಭಾರತಕ್ಕೆ ವಾಪಸ್ ಆಗಿದ್ದಾರೆ.
ಉಕ್ರೇನ್ ನಿಂದ ಭಾರತಕ್ಕೆ ಆಗಮಿಸಿರುವ ವಿದ್ಯರಥಿಗಳು ಕೇಂದ್ರ ಸರ್ಕಾರ ಹಾಗೂ ಭಾರತೀಯ ರಾಯಭಾರ ಕಚೇರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉಕ್ರೇನ್ ನಲ್ಲಿ ನಮಗೆ ಸಹಾಯದ ಅಗತ್ಯವಿದೆ. ಆದರೆ ಅಲ್ಲಿ ನಮಗೆ ಭಾರತ ಸರ್ಕಾರ ಸಹಾಯ ಮಾಡುತ್ತಿಲ್ಲ. ನಮಗೆ ಬೇಕಾಗಿರುವುದು ಬಾರ್ಡರ್ ಒಳಗಡೆ ಸಹಾಯ. ಡಬಲ್ ಹಣ ಕೊಟ್ಟು 700 ಕಿ.ಮೀ ಪ್ರಯಾಣಿಸಿ ಬಂದಿದ್ದೇವೆ. 1.50 ಲಕ್ಷ ರೂಪಾಯಿ ಹಣ ಖರ್ಚಾಗಿದೆ ಎಂದು ಕಿಡಿಕಾರಿದ್ದಾರೆ.
ನಾವು ಬಾರ್ಡರ್ ಕ್ರಾಸ್ ಮಾಡಿಬಂದ ಬಳಿಕ ಸರ್ಕಾರ ವಿಮಾನ ಬುಕ್ ಮಾಡಿದೆ ಅಷ್ಟೆ. ಭಾರತೀಯ ವಿದ್ಯಾರ್ಥಿಗಳಿಗೆ ಬೇಕಾಗಿರುವುದು ಉಕ್ರೇನ್ ಬಾರ್ಡರ್ ಒಳಗೆ ಸಹಾಯ. ಕೀವ್ ಹಾಗೂ ಖಾರ್ಕಿವ್ ನಲ್ಲಿನ ವಿದ್ಯಾರ್ಥಿಗಳು ಹೊರಬರಲಾಗದೇ ಪರದಾಡುತ್ತಿದ್ದಾರೆ. ಅಲ್ಲಿರುವ ವಿದ್ಯಾರ್ಥಿಗಳಿಗೆ ಭಾರತ ಸರ್ಕಾರ ತುರ್ತಾಗಿ ಕರೆತರಬೇಕು ಎಂದು ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ