Latest

ಮಾಜಿ ಸಚಿವೆ ಉಮಾಶ್ರೀ ಮನೆ ಕಳ್ಳತನ ಭೇದಿಸಿದ ಪೊಲೀಸರು

ಪ್ರಗತಿವಾಹಿನಿ ಸುದ್ದಿ; ಬಾಗಲಕೋಟೆ: ಹಿರಿಯ ನಟಿ, ಮಾಜಿ ಸಚಿವೆ ಉಮಾಶ್ರೀ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಾಗಲಕೋಟೆ ಪೊಲೀಸರು ಬಂಧಿಸಿದ್ದಾರೆ.

ಯಲ್ಲಪ್ಪ ಗಡ್ಡಿ, ದುರ್ಗಪ್ಪ ವಾಲ್ಮೀಕಿ ಬಂಧಿತ ಆರೋಪಿಗಳು. ಇತ್ತೀಚೆಗಷ್ಟೇ ಉಮಾಶ್ರೀಯವರ ಬಾಗಲಕೋಟೆ ಜಿಲ್ಲೆಯಲ್ಲಿರುವ ಬನಹಟ್ಟಿ ತಾಲೂಕಿನ ರಬಕವಿಯ ವಿದ್ಯಾನಗರದಲ್ಲಿರುವ ಮನೆಯಲ್ಲಿ ಕಳ್ಳತನವಾಗಿತ್ತು. ಈ ಪ್ರಕರಣ ಬೇಧಿಸಿದ ಪೊಲೀಸರು ಇದೀಗ ಕಳ್ಳರನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳಿಂದ 1,94,000 ರೂ ಹಣ ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button