
ಪ್ರಗತಿವಾಹಿನಿ ಸುದ್ದಿ: ಕನ್ನಡ ಚಿತ್ರರಂಗದ ಹಿರಿಯ ನಟ, ಹಾಸ್ಯ ಕಲಾವಿದ ಉಮೇಶ್ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು.
ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ.
ಇತ್ತೀಚೆಗೆ ಉಮೇಶ್ ಮನೆಯಲ್ಲಿ ಕಾಲು ಜಾರಿ ಬಿದ್ದಿದ್ದರು. ಆಸ್ಪತ್ರೆಗೆ ದಾಖಲಾಗಿದ್ದ ಅವರನ್ನು ಪರೀಕ್ಷಿಸಿದಾಗ ಅವರಿಗೆ ಕ್ಯಾನ್ಸರ್ ಇರುವುದು ಗೊತ್ತಾಗಿದೆ. ಅಲ್ಲದೇ ಲಿವರ್ ಕ್ಯಾನ್ಸರ್ 4ನೇ ಹಂತ ತಲುಪಿದೆ ಎಂದು ತಿಳಿದುಬಂದಿತ್ತು. ಚಿಕಿತ್ಸೆ ನೀಡಲಾಗಿದ್ದರೂ ಫಲದೇ ಸಾವನ್ನಪ್ಪಿದ್ದಾರೆ.
ಉಮೇಶ್ 1960ರದಶಕದಿಂದ ಕನ್ನಡ ಚಿತ್ರರಂಗದಲ್ಲಿ ಅಭಿನಯಿಸಿತ್ತಿದ್ದರು. ಇತ್ತೀಚಿನ ದಿನಗಳವರೆಗೂ ಸಿನಿಮಾಗಳಲ್ಲಿ ಸಕ್ರಿಯರಾಗಿದ್ದರು. 350ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಉಮೇಶ್ ಅಭಿನಯಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




