
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಸಚಿವ ಸಂಪುಟ ವಿಸ್ತರಣೆ ಮುಹೂರ್ತ ನಿಗದಿಯಾದರೆ ಸಿಎಂ ಯಡಿಯೂರಪ್ಪ ನನ್ನನ್ನು ಮಂತ್ರಿಯನ್ನಾಗಿ ಮಾಡ್ತಾರೆ. ಈ ಬಗ್ಗೆ ನನಗೆ ವಿಶ್ವಾಸವಿದೆ ಎಂದು ಶಾಸಕ ಉಮೇಶ್ ಕತ್ತಿ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಅವರು, ನಾನೊಬ್ಬ ಹಿರಿಯ ರಾಜಕಾರಣಿ. 8 ಬಾರಿ ಶಾಸಕನಾಗಿ ಆಯ್ಕೆಯಾದವನು. ಹಾಗಂತ ಸಚಿವ ಸ್ಥಾನಕ್ಕಾಗಿ ಯಾರ ಹಿಂದೆಯೂ ಹೋಗಲ್ಲ. ಬಿಎಸ್ ವೈ ಈ ಬಾರಿ ನನಗೂ ಮಂತ್ರಿ ಸ್ಥಾನ ನೀಡುವ ಭರವಸೆಯಿದೆ ಎಂದರು.
ಇನ್ನು ಸಿಎಂ ಬದಲಾವಣೆ ವಿಚಾರವಾಗಿ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಕತ್ತಿ, ಇನ್ನೂ ಮೂರು ವರ್ಷ ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿರ್ತಾರೆ. ಒಂದು ವೇಳೆ ಬದಲಾವಣೆ ಮಾಡಬೇಕಂದರೆ ಬಿಜೆಪಿಯವರು ಮಾಡ್ತಾರೆ. ಸಿದ್ದರಾಮಯ್ಯನವರು ಹೇಗೆ ಮಾಡ್ತಾರೆ? ಅನಗತ್ಯವಾಗಿ ಸಿದ್ದರಾಮಯ್ಯ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ