
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಸಚಿವ ಉಮೇಶ್ ಕತ್ತಿ ಅಕಾಲಿಕ ನಿಧನ ಆಘಾತ ತಂದಿದೆ. ಅತ್ಯಂತ ಆತ್ಮೀಯ ಸ್ನೇಹಿತ, ಸಂಪುಟದ ಹಿರಿಯ ಸಹೋದ್ಯೋಗಿ, ರಾಜ್ಯ ಕಂಡ ಧೀಮಂತ ನಾಯಕ ನಮ್ಮನ್ನು ಅಗಲಿದ್ದಾರೆ. ಇಂದು ಬೆಳಗಾವಿಗೆ ಅತ್ಯಂತ ಭಾರವಾದ ಹೃದಯದಿಂದ ಬಂದಿದ್ದೇನೆ. ಉಮೇಶ್ ಕತ್ತಿ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸುತ್ತಿದ್ದೇನೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದರು.
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಉಮೇಶ್ ಕತ್ತಿ ಅವರ ಅಂತ್ಯಕ್ರಿಯೆಗೆ ಎಲ್ಲ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರಿಗೆ ಕತ್ತಿ ಅವರ ಪಾರ್ಥಿವ ಶರೀರ ಅಂತಿಮ ದರ್ಶನಕ್ಕೆ, ಮನೆಯವರಿಗೆ ಪೂಜೆಗೆ ಅವಕಾಶ ಕಲ್ಪಿಸಲಾಗಿದೆ ಬಳಿಕ ರಾಜ್ಯ ಸರ್ಕಾರದಿಂದ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ ಎಂದರು.
ಸಚಿವ ಉಮೇಶ್ ಕತ್ತಿ ನಿಧನ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ ಘೊಷಣೆ ಮಾಡಲಾಗಿದೆ. ಇಂದು, ನಾಳೆ ಹಾಗೂ ನಾಡಿದ್ದು ಮೂರು ದಿನಗಳ ಕಾಲ ಅರ್ಧಕ್ಕೆ ರಾಷ್ಟ್ರಧ್ವಜ ಹಾರಿಸುವುದು, ಸರ್ಕಾರಿ ಕಾರ್ಯಕ್ರಮಗಳು ರದ್ದು ಪಡಿಸಲಾಗಿದೆ. ಮೂರು ದಿನ ಶೋಕಾಚರಣೆ ಹಿನ್ನೆಲೆಯಲ್ಲಿ ದೊಡ್ದಬಳ್ಳಾಪುರದಲ್ಲಿ ನಾಳೆ ನಡೆಯಬೇಕಿದ್ದ ಬಿಜೆಪಿ ಜನೋತ್ಸವ ಕಾರ್ಯಕ್ರಮವನ್ನು ಮುಂದೂಡಲಾಗಿದ್ದು, ಸೆ.11 ಭಾನುವಾರಕ್ಕೆ ನಿಗದಿಪಡಿಸಲಾಗಿದೆ ಎಂದು ತಿಳಿಸಿದರು.
ತುರ್ತಾಗಿ ಪ್ರವಾಹ ಪರಿಸ್ಥಿತಿ ನಿರ್ವಹಣೆ, ಕಾರ್ಯಾಚರಣೆ ಮುಂದುವರೆಯುತ್ತದೆ ಅದರ ಹೊರತಾಗಿ ಯಾವುದೇ ಸರ್ಕಾರಿ ಕಾರ್ಯಕ್ರಮಗಳು ಮೂರು ದಿನ ನಡೆಸುವಂತಿಲ್ಲ ಎಂದು ಹೇಳಿದರು.
BJP ಜನೋತ್ಸವ ಭಾನುವಾರಕ್ಕೆ ಮುಂದೂಡಿಕೆ
https://pragati.taskdun.com/politics/bjp-janotsavacanclledpostpone/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ