ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಆಹಾರ ಸಚಿವ ಉಮೇಶ್ ಕತ್ತಿ ಅವರ ಹಠಾತ್ ನಿಧನ ರಾಜ್ಯಕ್ಕೆ ಆಘಾತ ತಂದಿದೆ. ಅದರಲ್ಲಿಯೂ ಬೆಳಗಾವಿ ಜಿಲ್ಲೆ ಪ್ರಭಾವಿ ನಾಯಕನನ್ನು ಕಳೆದುಕೊಂಡು ಶೋಕಸಾಗರದಲ್ಲಿ ಮುಳುಗಿದೆ.
ಉಮೇಶ್ ಕತ್ತಿ ಅವರ ಸ್ವಗ್ರಾಮ ಬೆಲ್ಲದ ಬಾಗೇವಾಡಿಯಲ್ಲಿ ನೀರವ ಮೌನ ಆವರಿಸಿದೆ. ಸಚಿವರ ಅಗಲಿಕೆಗೆ ಗೌರವ ಸಲ್ಲಿಸುವ ನಿಟ್ಟಿನಲ್ಲಿ ಬಾಗೇವಾಡಿ ಹಾಗೂ ಹುಕ್ಕೇರಿ ಪಟ್ಟಣವನ್ನು ಸ್ವಘೋಷಿತವಾಗಿ ಬಂದ್ ಮಾಡಲಾಗಿದೆ.
ಹುಕ್ಕೇರಿ ಹಾಗೂ ಬೆಲ್ಲದ ಬಾಗೇವಾಡಿಯಲ್ಲಿನ ಅಂಗಡಿ, ಮುಗ್ಗಟ್ಟುಗಳು ಸಂಪೂರ್ಣ ಬಂದ್ ಆಗಿದ್ದು, ಸಚಿವ ಉಮೇಶ್ ಕತ್ತಿ ಅವರ ಅಂತಿಮ ದರ್ಶನಕ್ಕೆ ತೆರಳಲು ನಿವಾಸಿಗಳು, ಅಂಗಡಿ ಮಾಲೀಕರು ನಿರ್ಧರಿಸಿದ್ದಾರೆ. ಉಮೇಶ್ ಕತ್ತಿ ಅವರ ಸ್ವಗ್ರಾಮ ಬೆಲ್ಲದ ಬಾಗೇವಾಡಿಯಲ್ಲಿ ದು:ಖ ಮಡುಗಟ್ಟಿದೆ. 8 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸಚಿವ ಉಮೇಶ್ ಕತ್ತಿ 2011ರಲ್ಲಿ ಬೆಳಗಾವಿಯಲ್ಲಿ ವಿಶ್ವ ಕನ್ನಡ ಸಮ್ಮೇಳನ ಏರ್ಪಡಿಸಿದ್ದರು. ಉತ್ತರ ಕರ್ನಾಟಕ ಜನರ ಬಹು ನಿರೀಕ್ಷಿತ ಸುವರ್ಣ ವಿಧಾನಸೌಧ ಲೋಕಾರ್ಪಣೆ ಮಾಡಿ ಪ್ರಥಮ ಅಧಿವೇಶನ ಏರ್ಪಡಿಸಿ ಜಿಲ್ಲೆಯಲ್ಲಿ ಹಲವು ಅಭಿವೃದ್ಧಿ ಕೆಲಸಗಳಿಗೆ ವೇಗ ನೀಡಿದ್ದರು. ರೈತರ ಬಗ್ಗೆ ಅಪಾರ ಕಾಳಜಿಯುಳ್ಳ ಪ್ರಭಾವಿ ನಾಯಕನನ್ನು ಕಳೆದುಕೊಂಡು ಜಿಲ್ಲೆಯ ಜನರು ದು:ಖತಪ್ತರಾಗಿದ್ದಾರೆ.
HAL ನಿಂದ ಉಮೇಶ್ ಕತ್ತಿ ಪಾರ್ಥಿವ ಶರೀರ ಏರ್ ಲಿಫ್ಟ್
https://pragati.taskdun.com/latest/umesh-kattidead-bodyair-liftbelagavi/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ