ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಟಿವಿ, ಫ್ರಿಡ್ಜ್, ಬೈಕ್ ಇದ್ದವರು ಬಿಪಿಎಲ್ ಕಾರ್ಡ್ ಹಿಂದಿರುಗಿಸಿ ಎಂಬ ಸಚಿವ ಉಮೇಶ್ ಕತ್ತಿ ಹೇಳಿಕೆಗೆ ಇದೀಗ ಸ್ವಪಕ್ಷೀಯ ನಾಯಕರೇ ವಿರೋಧ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಶಾಸಕ ಸೋಮಶೇಖರ್ ರೆಡ್ಡಿ, ಸಚಿವ ಉಮೇಶ್ ಕತ್ತಿ ತಮ್ಮ ಸ್ವಂತ ನಿರ್ಧಾರವನ್ನು ಜನರ ಮೇಲೆ ಹೇರಬಾರದು. ಟಿವಿ, ಫ್ರಿಡ್ಜ್ ಸಾಮಾನ್ಯವಾಗಿ ಎಲ್ಲರ ಮನೆಯಲ್ಲೂ ಇರುತ್ತೆ. ಇನ್ನು ಬೈಕ್ ನ್ನು ಈಗ ಲೋನ್ ಮೇಲೂ ತೆಗೆದುಕೊಳ್ಳುತ್ತಾರೆ. ಸರ್ಕಾರದ ಯೋಜನೆಗಳು ಜನರಿಗೆ ತಲುಪಲು ಟಿವಿ ಬೇಕು. ಹಾಗಿರುವಾಗ ಇಂಥಹ ನಿಯಮ ಜಾರಿ ಮಾಡುವುದು ತಪ್ಪು ಎಂದರು.
ಸಚಿವರಾದವರು ಯಾವುದೇ ನಿರ್ಧಾರ ಕೈಗೊಳ್ಳುವ ಮೊದಲು ಸಚಿವ ಸಂಪುಟದಲ್ಲಿ ಚರ್ಚೆ ನಡೆಸಬೇಕು. ನಾವು ಬಿಜೆಪಿಯವರಾಗಿದ್ದರೂ ಕೂಡ ಇಂಥಹ ನಿರ್ಧಾರಗಳ ವಿರುದ್ಧ ಹೋರಾಡುತ್ತೇವೆ ಎಂದು ಹೇಳಿದರು.
ಟಿವಿ, ಫ್ರಿಡ್ಜ್, ಬೈಕ್ ಇದ್ದರೆ ಬಿಪಿಎಲ್, ಪಡಿತರ ರದ್ದು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ