Kannada NewsKarnataka NewsLatest
ಉಮೇಶ ಶರ್ಮಾ ನಿಧನ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಇಲ್ಲಿಯ ವಾಣಿಜ್ಯೋದ್ಯಮ ಸಂಘದ ಮಾಜಿ ಅಧ್ಯಕ್ಷ ಉಮೇಶ ಶರ್ಮಾ ನಿಧನರಾಗಿದ್ದಾರೆ. ಅವರಿಗೆ 56 ವರ್ಷ ವಯಸ್ಸಾಗಿತ್ತು.
ಶರ್ಮಾ ಇಂಡಸ್ಟ್ರೀಸ್ ಮಾಲಿಕರಾಗಿದ್ದ ಅವರು ಚೆಂಬರ್ ಆಫ್ ಕಾಮರ್ಸ್ ಮತ್ತು ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಅಲ್ಪಕಾಲದ ಅನಾರೋಗ್ಯದಿಂದಾಗಿ ಅವರು ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಅವರಿಗೆ ತಂದೆ, ತಾಯಿ, ಇಬ್ಬರು ಸಹೋದರರು, ಓರ್ವ ಸಹೋದರಿ ಇದ್ದಾರೆ.
ಸೋಮವಾರ ಬೆಳಗ್ಗೆ 10 ಗಂಟೆಗೆ ಸದಾಶಿವನಗರ ಸ್ಮಶಾನ ಭೂಮಿಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.



