Belagavi NewsBelgaum NewsKannada NewsKarnataka News

*ಮತ್ತೆರಡು ದಿನ ಅಬ್ಬರಿಸಲಿದೆ ಮಳೆ: 14 ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್*

ಪ್ರಗತಿವಾಹಿನಿ ಸುದ್ದಿ: ದಸರಾ ರಜೆಯಲ್ಲಿದ್ದ ರಾಜ್ಯದ ಜನರಿಗೆ ಮಳೆರಾಯ ಮತ್ತೆ ಶಾಕ್ ನೀಡಿದ್ದಾನೆ.  ಮತ್ತೆರಡು ದಿನಗಳ ಕಾಲ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದು ವರೆಯಲಿದೆ.‌

ಮುಂದಿನ 2 ದಿನಗಳ ಕಾಲ ಭಾರೀ ಮಳೆಯಾಗಲಿದ್ದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Home add -Advt

ಉಳಿದಂತೆ ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಧಾರವಾಡ, ಗದಗ, ಬೆಂಗಳೂರು ನಗರದಲ್ಲಿಯೂ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು ಗುರುವಾರ ಹಲವೆಡೆ ಸಾಧಾರಣ ಮಳೆಯಾಗಿದೆ. 

Related Articles

Back to top button