
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ನೂತನ ಸಚಿವ ಉಮೇಶ ಕತ್ತಿ ಶುಕ್ರವಾರ ಸಂಜೆ ಬೆಳಗಾವಿಗೆ ಆಗಮಿಸಿದರು.
ಬುಧವಾರ ಕತ್ತಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಗುರುವಾರ ವಿಧಾನಸೌಧದಲ್ಲಿ ತಮ್ಮ ಕೊಠಡಿಯಲ್ಲಿ ಪೂಜೆ ಸಲ್ಲಿಸಿ, ಶುಕ್ರವಾರ ಬೆಳಗಾವಿಗೆ ಆಗಮಿಸಿದರು. ಅವರಿಗೆ ಇನ್ನೂ ಖಾತೆ ಹಂಚಿಕೆಯಾಗಿಲ್ಲ.
ಕತ್ತಿ ಅವರನ್ನು ಸಂಸದ ಅಣ್ಣಾಸಾಹೇಬ ಜೊಲ್ಲೆ, ಶಾಸಕರಾದ ಅಭಯ ಪಾಟೀಲ, ಅನಿಲ ಬೆನಕೆ, ಕನ್ನಡ ಹೋರಾಟಗಾರ ಅಶೋಕ ಚಂದರಗಿ ಮೊದಲಾದವರು ಸ್ವಾಗಸಿದರು. ನಂತರ ಅವರು ಕಿತ್ತೂರು ಚನ್ನಮ್ಮ, ಬಿ.ಆರ್. ಅಂಬೇಡ್ಕರ್, ಬಸವೇಶ್ವರ ಮತ್ತು ಶಿವಾಜಿ ಪುತ್ಥಳಿಗಳಿಗೆ ಮಾಲಾರ್ಪಣೆ ಮಾಡಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ