Kannada NewsKarnataka NewsLatest

*ಭೂಗತ ಪಾತಕಿ ರವಿ ಪೂಜಾರಿ ಸಹಚರ ಮೊಹಮ್ಮದ್ ಹನೀಫ್ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಭೂಗತ ಪಾತಕಿ ರವಿ ಪೂಜಾರಿ ಸಹಚರ, ನಟೋರಿಯಸ್ ಶಾರ್ಪ್ ಶೂಟರ್ ಮೊಹಮ್ಮದ್ ಹನೀಫ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಕೇರಳದ ಮಂಜೇಶ್ವರ ಪೈವಳಿಕೆ ನಿವಾಸಿಯಾಗಿದ್ದ ಮೊಹಮ್ಮದ್ ಹನೀಫ್ ಭೂಗತ ಪಾತಕಿ ರವಿ ಪೂಜಾರಿ ಹಾಗೂ ಕಲಿಯೋಗೀಶ ಸಹಚರ. ಹಲವು ಶೂಟೌಟ್, ದರೋಡೆ, ಬೆದರಿಕೆ ಪ್ರಕರಣ ಸೇರಿದಂತೆ ರಾಜ್ಯದ ವಿವಿಧ ಠಾಣೆಯಲ್ಲಿ ಈತನ ವಿರುದ್ಧ ಪ್ರಕರಣ ದಾಖಲಾಗಿತ್ತು.

ಕೊಣಾಜೆ, ಮಂಗಳೂರು, ವಿಟ್ಲ, ಉಳ್ಳಾಲ, ಬೆಂಗಳೂರು ವಿಮಾನ ನಿಲ್ದಾಣ ಠಾಣೆಯಲ್ಲಿಯು ಪ್ರಕರಣಗಳು ದಾಖಲಾಗಿದ್ದವು. 2010 ಮತ್ತು 2013ರ ಕಾಸರಗೋಡು ಬೇವಿಂಜ ಪಿಡಬ್ಲ್ಯುಡಿ ಗುತ್ತಿಗೆದಾರನ ಶೂಟೌಟ್, ಪುತ್ತೂರು ರಾಜಧಾನಿ ಜ್ಯುವೆಲ್ಲರ್ಸ್ ನಲ್ಲಿ ಶೂಟೌಟ್, ಮಂಜೇಶ್ವರದಲ್ಲಿ ಕಳ್ಳತನ, ಸಂಜೀವ್ ಶೆಟ್ಟಿ ಸಿಲ್ಕ್ ಮಳಿಗೆ ಶೂಟೌಟ್ ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ.

ಎಸಿಪಿ ಧನ್ಯಾ ನಾಯಕ್ ನೇತೃತ್ವದ ತಂಡ ಹಾಗೂ ಕೋಣಾಜೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಕೇರಳದಲ್ಲಿ ಬಂಧಿಸಿದ್ದಾರೆ.

Home add -Advt


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button